Breaking News

ಕೆಆರ್‌ಎಸ್ ಒಳಹರಿವು ಶೂನ್ಯಕ್ಕೆ ತಲುಪಿದ್ದು, ನೀರು ಬಿಡುವ ಶಕ್ತಿ ನಮ್ಮಲ್ಲಿಲ್ಲ: ಡಿ‌.ಕೆ.ಶಿ.

Spread the love

ಬೆಂಗಳೂರು: ಕೆಆರ್‌ಎಸ್ ಒಳಹರಿವು ಶೂನ್ಯ ಮಟ್ಟ ತಲುಪಿದೆ.

ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ. ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್​ಗಳು ಸುಟ್ಟು ಹೋದ ಸ್ಥಳಕ್ಕೆ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸಿನ ಕುರಿತು ಪ್ರತಿಕ್ರಿಯಿಸಿ, “ಕೆಆರ್‌ಎಸ್‌ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್‌ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದೆ. ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ” ಎಂದರು.

“ಕುಡಿಯುವ ನೀರು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ. ಕಾವೇರಿ ನೀರಿನ ವಿಚಾರವಾಗಿ 89ನೇ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು, ನ.1 ರಿಂದ ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸು ಮಾಡಿದೆ” ಎಂದು ಹೇಳಿದರು.

ಅಗ್ನಿ ದುರಂತದಲ್ಲಿ ಪ್ರಾಣಹಾನಿ ಸಂಭವಿಸಿಲ್ಲ: ಬಸ್ ಅಗ್ನಿ ದುರಂತದ ಬಗ್ಗೆ ಮಾತನಾಡುತ್ತಾ, “ವೆಲ್ಡಿಂಗ್ ಮಾಡುವಾಗ ಕಿಡಿ ಹಾರಿ ಒಂದು ಬಸ್‌ಗೆ ಬೆಂಕಿ ಬಿದ್ದು, ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಯಾವುದೇ ಪ್ರಾಣಹಾನಿ ಸಂಭವಿಸದೇ ಇರುವುದು ಒಳ್ಳೆಯ ಸುದ್ದಿ. ಅಗ್ನಿಶಾಮಕ ದಳದವರು ಅತ್ಯಂತ ಶೀಘ್ರವಾಗಿ ಬೆಂಕಿ ನಂದಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕದಳದ ಉನ್ನತ ಅಧಿಕಾರಿಗಳಿಗೆ ಈ ವಿಚಾರವಾಗಿ ಪ್ರತ್ಯೇಕ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.


Spread the love

About Laxminews 24x7

Check Also

ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ,

Spread the loveಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ, ಪಾದಚಾರಿ ಮಾರ್ಗ (ಫುಟ್ ಪಾತ್) ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ