Breaking News

ಉನ್ನತ ಹುದ್ದೆಗಳನ್ನು ಅಲಕಂರಿಸಿರುವವರು ಅತ್ಯಂತ ಇತಿಮಿತಿಯಲ್ಲಿ ಮಾತನಾಡಬೇಕು: ಹೈಕೋರ್ಟ್

Spread the love

ಬೆಂಗಳೂರು: ಪ್ರಾದೇಶಿಕ ಭಾಷೆ ಮತ್ತು ರಾಜ್ಯ ಭಾಷೆಗಳಲ್ಲಿ ಶಿಕ್ಷಣ ಪಡೆಯುವವರು ಅಸಮರ್ಥರು ಎಂದು ಭಾವಿಸಬಾರದು.

ಪ್ರಾದೇಶಿ ಭಾಷೆಯಲ್ಲಿ ಶಿಕ್ಷಣ ಪಡೆದವರೂ ಯಶಸ್ವಿಯಾಗಬಹುದು. ಆದರೆ, ಈ ಸಮಸ್ಯೆಗಳನ್ನು ಕಾನೂನು ಅಂಶಗಳಲ್ಲಿ ಪರಿಗಣಿಸಬೇಕು ಎಂದಿರುವ ಹೈಕೋರ್ಟ್, ಈ ವಿಚಾರದಲ್ಲಿ ಉನ್ನತ ಸ್ಥಾನದಲ್ಲಿರುವವರು ಇತಿಮಿತಿಯಲ್ಲಿ ಮಾತನಾಡಬೇಕು ಎಂದು ತಿಳಿಸಿದೆ.

ಸಿಬಿಎಸ್ಸಿ ಮತ್ತು ಐಸಿಎಸ್ಸಿ ಮಂಡಳಿಗೆ ಪಠ್ಯ ಕ್ರಮಕ್ಕೆ ಕನ್ನಡ ಭಾಷೆ ಬೋಧನೆ ಕಡ್ಡಾಯ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಎಂಟು ಮಂದಿ ವಿದ್ಯಾರ್ಥಿಗಳ ಪೋಷಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆಭಿಪ್ರಾಯಪಟ್ಟಿತು.

ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರು, ನಾನೂ ಸಹಾ ಪ್ರಾದೇಶಿ ಭಾಷೆಯಲ್ಲಿ ಅಧ್ಯಯನ ಮಾಡಿದ್ದೇನೆ. ನನ್ನ ಸಾಧನೆಗೆ ಎಂದಿಗೂ ಭಾಷೆ ಅಡ್ಡಿಯಾಗಲಿಲ್ಲ. ಆದರೂ ನ್ಯಾಯಾಲಯ ಕಾನೂನಿನ ಅಂಶಗಳಡಿಯಲ್ಲಿ ಪರಿಗಣಿಸಿ ಪರಿಹಾರ ಕಂಡುಕೊಳ್ಳಬೇಕು. ಜೊತೆಗೆ, ಈ ರೀತಿಯ ವಿಚಾರಗಳಲ್ಲಿ ಉನ್ನತ ಸ್ಥಾನದಲ್ಲಿರುವವರು ಇತಿಮಿತಿಯಲ್ಲಿ ಮಾತನಾಡಬೇಕು ಎಂದು ಹೇಳಿದರು.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ