Breaking News

ಹಂಪಿ ದೇವಾಲಯ ಬಳಿಯ ಭೂಸ್ವಾಧೀನ ರದ್ದುಪಡಿಸಿದ ಹೈಕೋರ್ಟ್

Spread the love

ಬೆಂಗಳೂರು : ಹಂಪಿಯಲ್ಲಿರುವ ಉಗ್ರ ನರಸಿಂಹ ಮತ್ತು ಬಡವಿಲಿಂಗ ದೇವಾಲಯಗಳ ಸಂರಕ್ಷಿತ ಸ್ಮಾರಕಗಳಿರುವ ಜಾಗದಲ್ಲಿ ಮೂಲಸೌಕರ್ಯ ಸುಧಾರಣೆಗೆ ಸುಮಾರು ಏಳು ಎಕರೆ ಜಮೀನನ್ನು ಭೂ ಸ್ವಾಧೀನ ಪಡಿಸಿಕೊಂಡಿದ್ದ ಸರ್ಕಾರದ ಕ್ರಮವನ್ನು ಹೈಕೋರ್ಟ್ ರದ್ದುಗೊಳಿಸಿದೆ.

 

ಹೊಸಪೇಟೆ ತಾಲೂಕಿನ ಕೃಷ್ಣಾಪುರ ಮತ್ತು ಕಮಲಾಪುರ ಗ್ರಾಮಗಳ ವಿವಿಧ ಸರ್ವೆ ನಂಬರ್‌ಗಳಲ್ಲಿ ಭೂಮಿ ಸ್ವಾಧೀನ ಪಡಿಸಿಕೊಂಡಿರುವುದನ್ನು ಪ್ರಶ್ನಿಸಿ, 2007ರಲ್ಲಿ ನಿಡಶೇಷಿ ವೀರಣ್ಣ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಧಾರವಾಡ ನ್ಯಾಯಪೀಠ, ಭೂಸ್ವಾಧೀನ ಮಾಡಿಕೊಂಡು 2006ರ ಏ. 5 ರಂದು ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದೆ.

ಸರ್ಕಾರ ಸ್ವಾಧೀನಪಡಿಸಿಕೊಂಡಿರುವ ಭೂಮಿ ಬಡ ರೈತರ ಜೀವನಾಡಿಯಾಗಿದೆ. ಈ ಪ್ರಕರಣದಲ್ಲಿ ಭೂಸ್ವಾಧೀನಕ್ಕೆ ಯಾವುದೇ ನೈತಿಕ ಕಾರಣಗಳಿಲ್ಲ. ರಾಷ್ಟ್ರೀಯ ಸ್ಮಾರಕಗಳ ಸುಂದರೀಕರಣಕ್ಕಾಗಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿರುವುದರಿಂದ ಅರ್ಜಿದಾರರು ತಮ್ಮ ಆಕ್ಷೇಪಣೆಯನ್ನು ಸಲ್ಲಿಸುವ ಮೂಲಕ ವಿಚಾರಣೆಗೆ ಅರ್ಹರಾಗಿರುತ್ತಾರೆ. ಅದಕ್ಕಾಗಿ ತುರ್ತು ಷರತ್ತು ವಿಧಿಸಿ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುವುದಿಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಭೂ ಸ್ವಾಧೀನ ಕಾಯಿದೆ 1894ರ ಸೆಕ್ಷನ್ 5ಎ ಅನ್ವಯ ಆಕ್ಷೇಪಣೆಗಳ ವಿಚಾರಣೆಯನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಅದನ್ನು ರದ್ದುಪಡಿಸಿ ಕಾಯಿದೆಯ ಸೆಕ್ಷನ್ 17ರ ಅಡಿಯಲ್ಲಿ ತುರ್ತು ನಿಬಂಧನೆಯನ್ನು ಅನ್ವಯಿಸುವ ಮೂಲಕ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವ ರಾಜ್ಯ ಸರ್ಕಾರದ ಕ್ರಮವು ದುರುದ್ದೇಶದಿಂದ ಕೂಡಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ