Breaking News

ಐದು ವರ್ಷ ನಮ್ಮದೇ ಸರ್ಕಾರ , ನಾನೇ C.M.: ಸಿದ್ದರಾಮಯ್ಯ

Spread the love

ವಿಜಯನಗರ: ಐದು ವರ್ಷ ನಮ್ಮದೇ ಸರ್ಕಾರ ಇರಲಿದ್ದು, ನಾನೇ ಮುಂದುವರೆಯುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಹಂಪಿಯಲ್ಲಿ ಕರ್ನಾಟಕ ಸಂಭ್ರಮ 50ಕ್ಕೆ ಚಾಲನೆ ಹಾಗೂ ಇತರ ಕಾರ್ಯಗಳಿಗೆ ಹೊಸಪೇಟೆಗೆ ಸಿಎಂ ಆಗಮಿಸಿದ್ದರು.

ಈ ವೇಳೆ ಬದಲಾವಣೆ ವಿಚಾರದ ಪ್ರಶ್ನೆ ಮಾಡಿದ ಸುದ್ದಿಗಾರರಿಗೆ ಅವರು, “ಐದು ವರ್ಷ ನಮ್ಮದೇ ಸರ್ಕಾರ ಇರುತ್ತದೆ. ನಾನು ಈಗ ಮುಖ್ಯಮಂತ್ರಿ” ಎಂದು ಉತ್ತರಿಸಿದ್ದಲ್ಲದೇ, 5 ವರ್ಷ ನೀವೇ ಸಿಎಂ ಆಗಿರುತ್ತೀರಾ ಎನ್ನುವ ಪ್ರಶ್ನೆಗೆ “ನಾನೇ ಮುಂದುವರೆಯುವೆ, ಡಿಸಿಎಂ ವಿಚಾರವಾಗಿ ತೀರ್ಮಾನ ಮಾಡುವುದು ಹೈಕಮಾಂಡ್. ನಮ್ಮದು ನ್ಯಾಷನಲ್ ಪಾರ್ಟಿ, ಏನೇ ತೀರ್ಮಾನವಿದ್ದರೂ ಹೈಕಮಾಂಡ್ ಜೊತೆ ಚರ್ಚೆ ಮಾಡಿದ ಬಳಿಕವೇ ಆಗಲಿದೆ” ಎಂದು ಪ್ರತಿಕ್ರಿಯಿಸಿದರು.

ಸರ್ಕಾರ ಬೀಳುತ್ತೆ ಎನ್ನುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ”ಅವರು ಸೋತಿದ್ದಾರೆ. ಬೇರೆ ಕೆಲಸ ಇಲ್ಲದೇ ಬಾಯಿಗೆ ಬಂದಂತೆ ಮಾತಾಡ್ತಾನೆ. ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ. ಐದು ವರ್ಷ ಸುಭದ್ರ ಸರ್ಕಾರ ಕೊಡುತ್ತೇವೆ. ಬಿಜೆಪಿಯವರು ಭ್ರಮ ನೀರಸವಾಗಿದ್ದಾರೆ. ಅವರಿಗೆ ಅಧಿಕಾರ ಇಲ್ಲದೇ ಇರಲು ಆಗುವುದಿಲ್ಲ. ಈ ಹಿಂದೆ ಆಪರೇಷನ್ ಮಾಡಿ ಯಶಸ್ಸು ಕಂಡಿದ್ದಾರೆ. ಮತ್ತೆ ಆಪರೇಷನ್ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅದು ಸಾಧ್ಯವಾಗಲ್ಲ” ಎಂದು ಬಿಜೆಪಿಗರಿಗೆ ತಿರುಗೇಟು ನೀಡಿದರು.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ