Breaking News

ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ:B.S.Y.

Spread the love

ಬೆಂಗಳೂರು/ಶಿವಮೊಗ್ಗ: ವಿರೋಧ ಪಕ್ಷದ ನಾಯಕರನ್ನು ಹೈಕಮಾಂಡ್ ಆದಷ್ಟು ಬೇಗ ನೇಮಿಸುತ್ತದೆ ಎಂಬ ವಿಶ್ವಾಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲರೂ ವಿರೋಧ ಪಕ್ಷದ ನಾಯಕರನ್ನು ಯಾವಾಗ ಆಯ್ಕೆ ಮಾಡುತ್ತೀರಾ ಎಂದು ಕೇಳುತ್ತಿದ್ದಾರೆ. ಈಗಾಗಲೇ ಪ್ರಕ್ರಿಯೆ ತಡವಾಗಿದೆ. ಆದಷ್ಟು ಬೇಗ ಆಯ್ಕೆ ಮಾಡಲಾಗುವುದು ಎಂದರು.

ನಮ್ಮ ಪಕ್ಷದ ವತಿಯಿಂದ ಇಂದಿನಿಂದ ಹತ್ತಾರು ತಂಡಗಳು ಬರ ಅಧ್ಯಯನಕ್ಕಾಗಿ ರಾಜ್ಯದಲ್ಲಿ ಪ್ರವಾಸ ಮಾಡಲಿವೆ. ನಾನು ಭದ್ರಾವತಿಯಲ್ಲಿ ನಡೆಯುವ ವಿಐಎಸ್‌ಎಲ್ ಕಾರ್ಖಾನೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದೇನೆ. ಕಾರ್ಯಕ್ರಮ ಮುಗಿಸಿ ನ.5ರ ನಂತರ ಬರ ಅಧ್ಯಯನ ತಂಡದ ಜೊತೆ ನಾನುೂ ಸೇರಿಕೊಳ್ಳುವೆ ಎಂದು ತಿಳಿಸಿದರು.

ನಾಳೆ ಮೈಸೂರು ಸಂಸ್ಥಾನದ ಯದುವೀರದತ್ತ ಚಾಮರಾಜ ಒಡೆಯರ್ ಅವರು ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಬಳಿಕ ಅವರು ನಮ್ಮ ಮನೆಗೆ ವಿಶೇಷ ಔತಣಕ್ಕೆ ಬರುವ ಸಂಭವವಿದೆ ಎಂದು ಹೇಳಿದರು.

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ನಮ್ಮ ಪಕ್ಷದ ವತಿಯಿಂದ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ ಬಿಎಸ್​ವೈ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ದೆಹಲಿ ಭೇಟಿ ವಿಚಾರ ಕೇಳಿದಾಗ, ಈಶ್ವರಪ್ಪ ಸೇರಿದಂತೆ ಇತರರನ್ನು ಹೈಕಮಾಂಡ್ ಸುಮ್ಮನೆ ಕರೆದಿದ್ದಾರೆ. ಅವರ ಭೇಟಿಗೆ ಅಂತಹ ವಿಶೇಷತೆ ಏನೂ ಇಲ್ಲ ಎಂದು ಉತ್ತರಿಸಿದರು.


Spread the love

About Laxminews 24x7

Check Also

ಸರ್ಕಾರಕ್ಕೆ 4,416 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹ: ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಗೆ ಪಣ, ಗಡಿಯಲ್ಲಿ ಕಟ್ಟೆಚ್ಚರ

Spread the loveಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಕಳ್ಳಭಟ್ಟಿ ಮತ್ತು ಕಲಬೆರೆಕೆ ಸೇಂದಿ ಹಾಗೂ ಮಾದಕ ವಸ್ತುಗಳ (ಗಾಂಜಾ ಮತ್ತು ಇತರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ