Breaking News

ಕೌಟುಂಬಿಕ ಕಲಹ ಹಿನ್ನೆಲೆ: ಮನನೊಂದು ವಿವಾಹಿತ ಯುವಕ ಆತ್ಮಹತ್ಯೆ

Spread the love

ಹುಬ್ಬಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ವಿವಾಹಿತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟಿಲಿಂಗೇಶ್ವರ ನಗರದಲ್ಲಿ ನಡೆದಿದೆ.‌ ನಿಖಿಲ್ ಕುಂದಗೋಳ (28) ಮನೆಯಲ್ಲೆ ಆತ್ಮಹತ್ಯೆಗೆ ಶರಣಾದ ಯುವಕ.

ಮೃತ ನಿಖಿಲ್​ ಪ್ರೀತಿ ಎಂಬ ಯುವತಿಯನ್ನು‌ ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದ.

ಆದರೆ, ಕಳೆದ ಕೆಲ‌ ತಿಂಗಳಿಂದ ಪತಿ ಹಾಗೂ ಪತ್ನಿಯ ನಡುವೆ ವಿರಸ ಮೂಡಿದ್ದು, ನಿತ್ಯ ಇಬ್ಬರ ಮಧ್ಯೆ ಜಗಳವಾಗುತ್ತಿತ್ತು. ಪರಿಣಾಮ ಪತ್ನಿ ಪ್ರೀತಿ ನಿಖಿಲ್ ಕಿರುಕುಳ ನೀಡಿದ್ದಾನೆಂದು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇಲೆ ಕೇಶ್ವಾಪುರ ಪೊಲೀಸರು ನಿಖಿಲ್‌ನನ್ನು ಕರೆಸಿ ವಿಚಾರಣೆ ನಡೆಸಿದ್ದರು. ಬಳಿಕ ನಿಖಿಲ್​​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ‌ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಕುರಿತು ಟ್ವಿಟ್​ ಮಾಡಿರುವ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು, ಠಾಣೆಯಲ್ಲಿ ಸ್ವೀಕೃತವಾಗಿದ್ದ ಅರ್ಜಿ ಸಂಬಂಧ ನೋಟಿಸ್ ಜಾರಿ ಮಾಡಿ ವಿಚಾರಣೆಗಾಗಿ ಠಾಣೆಗೆ ಕರೆಯಿಸಲಾಗಿತ್ತು. ಪ್ರಕರಣದ ಎದರುಗಾರರು ಮತ್ತು ದೂರುದಾರರು ಪರಸ್ಪರ ಬಗೆಹರಿಸಿಕೊಳ್ಳುವುದಾಗಿ ಕೈಬರಹದಲ್ಲಿ ಬರೆದುಕೊಟ್ಟು ಹೋಗಿರುತ್ತಾರೆ ಎಂದಿದ್ದಾರೆ.

 


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ