Breaking News

ಡಿ.ಕೆ.ಶಿವಕುಮಾರ್‌ ಹೆಸರಲ್ಲಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ದುಡ್ಡು ವಸೂಲಿ: ಕೆಂಪಣ್ಣ ಆರೋಪ

Spread the love

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಇಂಜಿನಿಯರ್ ವಿರುದ್ಧ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಲಂಚದ ಆರೋಪ ಮಾಡಿದ್ದಾರೆ. ಸದಾಶಿವನಗರದಲ್ಲಿ ಶನಿವಾರ ಖಾಸಗಿ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಬಳಿಕ ಮಾತನಾಡಿದ ಅವರು, “ನಾನು ಸಿನಿಯಾರಿಟಿ ಪ್ರಕಾರ ಹಣ ಕೊಡಿ ಅಂತ ಕೇಳಿದ್ದೇನೆ. ಸ್ವಲ್ಪ ಹಣ ರಿಲೀಸ್ ಮಾಡಿದ್ದಾರೆ. ನಮಗೆ ತೃಪ್ತಿ ಇದೆ ಅಂತ ಹೇಳಲ್ಲ, ಗುತ್ತಿಗೆದಾರರ ಹಣವನ್ನು ಪೂರ್ತಿಯಾಗಿ ಕ್ಲಿಯರ್ ಮಾಡೋಕೆ ಹೇಳಿದ್ದೇನೆ. ಡಿಸೆಂಬರ್‌ ಒಳಗಡೆ ಟ್ರೈ ಮಾಡ್ತೀನಿ ಅಂತ ಹೇಳಿದ್ದಾರೆ. ನಾನು ಇವತ್ತು ಖಾಸಗಿ ವಿಚಾರವಾಗಿ ಭೇಟಿಯಾಗಿದ್ದು ಅಷ್ಟೇ” ಎಂದು ತಿಳಿಸಿದರು.

ಇದೇ ವೇಳೆ ಬಿಬಿಎಂಪಿ ಚೀಫ್ ಇಂಜಿನಿಯರ್ ಬಿ.ಎಸ್.ಪ್ರಹ್ಲಾದ್ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಕೆಂಪಣ್ಣ, “ಬಿ.ಎಸ್.ಪ್ರಹ್ಲಾದ್ ಇರುವರೆಗೂ ಬಿಬಿಎಂಪಿ ಉದ್ಧಾರ ಆಗಲ್ಲ. ಈಗಲೂ ಹೇಳುತ್ತೇನೆ, ಮುಂದೇನೂ ಹೇಳುತ್ತೇನೆ. ಅವರು ಬಂದಾಗಿನಿಂದ ಒಂದೂ ದೊಡ್ಡ ಕೆಲಸ ಮಾಡಿಲ್ಲ” ಎಂದು ಆರೋಪಿಸಿದರು.

“ಇವರ ಹೆಸರು ಹೇಳಿ ದುಡ್ಡು ವಸೂಲಿ ಮಾಡುತ್ತಿದ್ದಾರೆ. ಬಿಬಿಎಂಪಿ ಹಾಳು ಮಾಡುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಗಮನಕ್ಕೆ ತರಬೇಕಿತ್ತು. ಆದರೆ ಇಂದು ಬೇರೆ ಕೆಲಸದ ನಿಮಿತ್ತ ಬಂದಿದ್ದೇನೆ, ಹೀಗಾಗಿ ಮಾತಾಡಿಲ್ಲ. ನಮ್ಮ ಸಂಘದ ಪದಾಧಿಕಾರಿಗಳ ಜೊತೆಗೆ ಬಂದು ಮಾತನಾಡುತ್ತೇನೆ” ಎಂದು ತಿಳಿಸಿದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ