ರಾಮದುರ್ಗ ತಾಲೂಕಿನ ತುರನೂರ ಗ್ರಾಮದಲ್ಲಿ ಸರಣಿ ಸಾವು 45 ದಿನದಲ್ಲಿ ಒಂದೇ ಗ್ರಾಮದ 30 ಜನ ಸಾವು;

Spread the love

ಬೆಳಗಾವಿ: ಒಬ್ಬರಲ್ಲ, ಇಬ್ಬರಲ್ಲ, ಒಂದೂವರೆ ತಿಂಗಳಲ್ಲಿ ಬರೋಬ್ಬರಿ 30 ಜನರ ಅಕಾಲಿಕ ಮರಣ. ಈ ದಿಢೀರ್​ ಸಾವುಗಳಿಗೆಕಾರಣವೇ ಗೊತ್ತಿಲ್ಲ.

ಹೌದು,ಜಿಲ್ಲೆಯ ರಾಮದುರ್ಗ ತಾಲೂಕಿನ ತುರನೂರ ಗ್ರಾಮದಲ್ಲಿ ಸರಣಿ ಸಾವು ಸಂಭವಿಸುತ್ತಿರುವುದರಿಂದ ಊರಿನ ಜನರು ಆತಂಕಕ್ಕೊಳಗಾಗಿದ್ದಾರೆ. ಕಳೆದ 45 ದಿನಗಳ ಅಂತರದಲ್ಲಿ 30 ಜನ ಸಾವನ್ನಪ್ಪಿದ್ದಾರೆ. ಈ ಸರಣಿ ಸಾವಿನಿಂದಾಗಿ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ.

ಗ್ರಾಮಸ್ಥರು ಏನಂತಾರೆ? : ಈ ಸಾವುಗಳಿಗೆ ಗ್ರಾಮದ ದುರ್ಗಾದೇವಿಗೆ ಪೂಜೆ ಸಲ್ಲಿಸುವಾಗ ದೇವಿ ಮೂರ್ತಿಯು ವಿರೂಪಗೊಂಡಿರುವುದು ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ. ವಿರೂಪಗೊಂಡ ಬಳಿಕ ಗ್ರಾಮದಲ್ಲಿ ಪ್ರತಿದಿನವೂ ಒಬ್ಬೊಬ್ಬರು ನಿಧನರಾಗುತ್ತಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

ಈ ಹಿನ್ನೆಲೆ ಗ್ರಾಮಸ್ಥರು, ಗೊಡಚಿ ವೀರಭದ್ರೇಶ್ವರ ದೇವಸ್ಥಾನದ ಅರ್ಚಕರ ಸಲಹೆಯಂತೆ ಹೋಮ ಹವನ, ಅಭಿಷೇಕ ಮಾಡುವ ಮೂಲಕ ದೇವಿಯನ್ನು ಶಾಂತ ಪಡಿಸಲು ತೀರ್ಮಾನ ಕೈಗೊಂಡಿದ್ದಾರೆ. ಅಲ್ಲದೆ ಗ್ರಾಮದಲ್ಲಿ ಮಂಗಳವಾರ ದಿನ ವಾರ ಹಿಡಿದು ದೇವಿಗೆ ಉಡಿ ತುಂಬುವುದು, ಆ ದಿನ ಯಾರೂ ಯಾವುದೇ ಕೆಲಸ-ಕಾರ್ಯ ಮಾಡದೇ ಮನೆಯಲ್ಲೇ ದೇವಿಯ ಜಪ ಮಾಡಲು ನಿರ್ಧರಿಸಿದ್ದಾರೆ.

ಇನ್ನು, ಅರ್ಚಕರ ಸಲಹೆಯಂತೆ ಕಳೆದ 15 ದಿನಗಳಿಂದ ದೇವಿಯ ಗರ್ಭಗುಡಿಯನ್ನು ಗ್ರಾಮಸ್ಥರು ಮುಚ್ಚಿದ್ದಾರೆ. ಅರ್ಚಕರು ಬಂದಾಗ ಮಾತ್ರ ಗರ್ಭಗುಡಿ ತೆರೆದು ದೇವಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಇದೇ ತಿಂಗಳ 15 ರಂದು ದೇವಿಯ ಜಾತ್ರೆ ಮಾಡಲು ಗ್ರಾಮಸ್ಥರು ತೀರ್ಮಾ‌ನಿಸಿದ್ದು, ಜಾತ್ರೆ ನಿಮಿತ್ತ ಹೋಮ- ಹವನ,‌ ಕುಂಭಮೇಳ, ದೇವಿಗೆ ಉಡಿ ತುಂಬಲಿದ್ದಾರೆ. ಅಲ್ಲದೇ ಮನೆಗೊಂದು ಕುರಿ ಮರಿಯನ್ನು ದೇವಿಗೆ ಬಲಿ ಕೊಟ್ಟು ಸಿಟ್ಟಾಗಿರುವ ದೇವಿಯನ್ನು ಶಾಂತ ಮಾಡಲು ಮುಂದಾಗಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆಈಟಿವಿ ಭಾರತ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಅವರನ್ನು ಸಂಪರ್ಕಿಸಿದಾಗ, “ತೂರನೂರ ಗ್ರಾಮದಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ 30 ಸಾವುಗಳು ಸಂಭವಿಸಿರುವ ಕುರಿತು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಕೂಡಲೇ ರಾಮದುರ್ಗ ತಾಲೂಕು ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಗ್ರಾಮದಲ್ಲಿ ಆರೋಗ್ಯ ಜಾಗೃತಿ, ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸೂಚಿಸುತ್ತೇನೆ. ಅಲ್ಲದೇ ಖುದ್ದು ನಾನೇ ತುರನೂರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಗ್ರಾಮಸ್ಥರು ಧೈರ್ಯದಿಂದ ಇರಬೇಕು. ಯಾರೂ ಆತಂಕಕ್ಕೆ ಒಳಗಾಗಬಾರದು” ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಕರೆಂಟ್ ಶಾಕ್ ಹೊಡೆದು ಅಣ್ಣ-ತಮ್ಮ ಇಬ್ಬರೂ ಸಾವು

Spread the love ವಿಜಯಪುರ: ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಅಣ್ಣ-ತಮ್ಮ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ