Breaking News

ರಾಜ್ಯದೆಲ್ಲೆಡೆ ಕೃಷಿ ಪಂಪ್​ಸೆಟ್​ಗಳಿಗೆ ಏಳು ತಾಸು ನಿರಂತರ ವಿದ್ಯುತ್ ಪೂರೈಕೆ: ಸಿಎಂ

Spread the love

ಬೆಂಗಳೂರು : ಕೃಷಿ ಪಂಪ್​ಸೆಟ್​ಗೆ ಇನ್ನು ಮುಂದೆ ನಿರಂತರ 7 ತಾಸು ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆ ಪರಿಶೀಲನೆ ನಡೆಸಿ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೂರು ವಾರಗಳ ಹಿಂದೆ ಇಂಧನ ಇಲಾಖೆಯಲ್ಲಿ ಪರಿಶೀಲನೆ ಮಾಡಲಾಗಿತ್ತು. ಆಗಲೇ ಕೃಷಿ ಪಂಪ್​ಸೆಟ್​ಗೆ ಏಳು ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ಭರವಸೆ ಕೊಟ್ಟಿದ್ದೆವು. ಆಗ ನಮಗೆ ಐದು ಗಂಟೆ ವಿದ್ಯುತ್ ಕೊಟ್ಟರೆ ಸಾಕು ಎಂದು ಕೆಲವರು ಹೇಳಿದ್ದರು.

ಅದರ ಪ್ರಕಾರ ಐದು ಗಂಟೆ ವಿದ್ಯುತ್ ಕೊಡಲು ಸೂಚಿಸಿದ್ದೆ. ಬಳಿಕ ಐದು ಗಂಟೆ ಸಾಕಾಗಲ್ಲ ಏಳು ಗಂಟೆ ಕೊಡಬೇಕು ಎಂದು ಕೆಲವರು ಆಗ್ರಹಿಸಿದ್ದಾರೆ. ಅದರಂತೆ ಯಾದಗಿರಿ, ಕೊಪ್ಪಳ, ರಾಯಚೂರಿನಲ್ಲಿ ಏಳು ಗಂಟೆ ವಿದ್ಯುತ್ ಕೊಡಲು ಸೂಚನೆ ನೀಡಿದ್ದೆ.

ಈಗ ವಿದ್ಯುತ್ ಉತ್ಪಾದನೆಯಲ್ಲಿ ಸುಧಾರಣೆಯಾಗಿದ್ದು, ರಾಜ್ಯದ ಉಳಿದ ಎಲ್ಲಾ ಕಡೆಯೂ ಏಳು ಗಂಟೆ ವಿದ್ಯುತ್ ಕೊಡಲು ನಿರ್ಧರಿಸಿದ್ದೇವೆ ಎಂದು ಸಿಎಂ ಇದೇ ವೇಳೆ ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ