Breaking News

ಚಳಿಗಾಲ ಅಧಿವೇಶನಕ್ಕೆ ಬರುವ ಜನಪ್ರತಿನಿಧಿಗಳೇ ನಮ್ಮ ಆತಿಥ್ಯ ಸ್ವೀಕರಿಸಿ: ರೈತರ ವಿಶೇಷ ಮನವಿ

Spread the love

ಬೆಳಗಾವಿ : ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನಕ್ಕೆ ಬರುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಆತಿಥ್ಯ ನೀಡಲು ಜಿಲ್ಲೆಯ ರೈತರು ಸಜ್ಜಾಗಿದ್ದಾರೆ. ಭೀಕರ ಬರಗಾಲ ಹಿನ್ನೆಲೆ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿವೇಶನ ಮುಗಿಯೋವರೆಗೂ ನಮ್ಮ ಮನೆಯಲ್ಲಿ ಇರುವಂತೆ ಬಹಿರಂಗ ಆಹ್ವಾನ ಕೊಟ್ಟಿದ್ದಾರೆ.

ಕಂಡು ಕೇಳರಿಯದ ಬರಗಾಲ ರಾಜ್ಯದಲ್ಲಿ ತಾಂಡವವಾಡುತ್ತಿದೆ. ಅದರಲ್ಲೂ ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಕ್ಷೇತ್ರಗಳಿಗೆ ಅನುದಾನ ನೀಡಲು ಸರ್ಕಾರ ಪರದಾಡುತ್ತಿದೆ. ಈ ನಡುವೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ ತಿಂಗಳಲ್ಲಿ ಚಳಿಗಾಲ ಅಧಿವೇಶನ ನಡೆಸಲು ಸರ್ಕಾರ ಸಿದ್ಧತೆ ನಡೆಸಿದೆ. ಇನ್ನು ಅಧಿವೇಶನಕ್ಕೆ ಬರುವ ಶಾಸಕರು, ಮಂತ್ರಿ ಮಹೋದಯರು ಮತ್ತು ಅಧಿಕಾರ ವರ್ಗ ಉಳಿದುಕೊಳ್ಳಲು, ಊಟ – ಉಪಚಾರಕ್ಕೆ ಕೋಟಿ, ಕೋಟಿ ಖರ್ಚಾಗುತ್ತದೆ. ಈ ಆರ್ಥಿಕ ಹೊರೆ ತಗ್ಗಿಸಲು‌ ಬೆಳಗಾವಿ ಜಿಲ್ಲೆಯ ರೈತ ಮುಖಂಡರು ಮತ್ತು ರೈತರು ಮುಖ್ಯಮಂತ್ರಿ ಸಹಿತ, ಸಚಿವರು, ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರು ಹಾಗೂ ಪರಿಷತ್ ಸದಸ್ಯರಿಗೆ ತಮ್ಮ ಮನೆಗಳಲ್ಲಿ ವಸತಿ ಮತ್ತು ಊಟದ ವ್ಯವಸ್ಥೆ ಮಾಡಲು ಮುಂದಾಗಿದ್ದಾರೆ‌.

ಬೆಳಗಾವಿ ತಾಲೂಕಿನ ಹಲಗಾ, ಬಸ್ತವಾಡ, ಕೊಂಡಸಕೊಪ್ಪ, ಕೋಳಿಕೊಪ್ಪ, ಧಾಮನೆ, ಕೆ.ಕೆ.ಕೊಪ್ಪ, ಮಜಗಾವಿ, ಮಚ್ಛೆ, ಹಿರೇಬಾಗೇವಾಡಿ, ಸಾಂಬ್ರಾ, ಕಾಕತಿ, ಬಸ್ಸಾಪುರ, ಅರಳೀಕಟ್ಟಿ, ಚಂದನಹೊಸುರ, ಗಣಿಕೊಪ್ಪ, ಹೊನಗಾ, ಕಡೋಲಿ, ಅಂಬೇವಾಡಿ, ಉಚಗಾಂವ, ಪೀರಣವಾಡಿ, ದೇಸೂರ, ನಂದಿಹಳ್ಳಿ, ಸುಳೇಭಾವಿ, ಮಾರಿಹಾಳ ಸೇರಿ 25 ಹಳ್ಳಿಗಳ 500ಕ್ಕೂ ಹೆಚ್ಚು ಮನೆಗಳಲ್ಲಿ ಅಧಿವೇಶನಕ್ಕೆ ಬರುವರ ಆತಿಥ್ಯಕ್ಕೆ ರೈತರು ತಯಾರಿ ನಡೆಸುತ್ತಿದ್ದಾರೆ.

 


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ