Breaking News

ನವೆಂಬರ್ 26 ರಂದು ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

Spread the love

ಬೆಂಗಳೂರು: ನವೆಂಬರ್ 26 ರಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ 2023 ಅನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದ್ದು, ಡಿಸೆಂಬರ್ 31 ರಂದು ನಡೆಸಲು ಚಿಂತನೆ ನಡೆಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಮೂಲಕ ತಿಳಿಸಿದೆ‌.

 

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ 2023 (ಕೆ ಸೆಟ್-2023) ಅನ್ನು ನವೆಂಬರ್ 26 ರಂದು ನಿಗದಿಪಡಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಈ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರೀಕ್ಷೆಯು ನಡೆಯುವ ದಿನಾಂಕವನ್ನು ತಾತ್ಕಾಲಿಕವಾಗಿ ಡಿಸೆಂಬರ್ 31 ಎಂದು ನಿಗದಿಪಡಿಸಲಾಗಿದೆ ಎಂದು ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಮೂಲಕ ತಿಳಿಸಿದೆ.

ಇತ್ತೀಚೆಗಷ್ಟೆ ವಿವಿಧ ನಿಗಮ ಮಂಡಳಿಗಳ ವಿವಿಧ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಪರೀಕ್ಷೆಯಲ್ಲಿ ಅಕ್ರಮ ನಡೆದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಪರೀಕ್ಷಾ ಅಕ್ರಮದ ಆರೋಪದ ನಡುವೆ ಮತ್ತೊಂದು ಪರೀಕ್ಷೆ ನಡೆಸುವುದು ಬೇಡ ಎನ್ನುವ ಕಾರಣಕ್ಕಾಗಿ ನವೆಂಬರ್ 26 ರಂದು ನಡೆಯಬೇಕಿದ್ದ ಕೆ ಸೆಟ್ ಪರೀಕ್ಷೆ ಮುಂದೂಡಿಕೆ ಮಾಡಿರಬಹುದು ಎನ್ನಲಾಗಿದೆ.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ