Breaking News

ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಕೊಲೆ. ಹಳೆ ವೈಷಮ್ಯದಿಂದ ಹತ್ಯೆ ಶಂಕೆ.

Spread the love

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬುಧವಾರ ರಾತ್ರಿ 9:30ರ ಸುಮಾರಿಗೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ.

ಸಹದೇವ್ ಕೊಲೆಯಾದ ರೌಡಿಶೀಟರ್​​​​. ಟೀ ಕುಡಿಯಲು ಬೇಕರಿ ಬಳಿ ಬಂದಿದ್ದಾಗ ಮೂರು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳ ಗುಂಪು, ​ಸಹದೇವ್ ಮೇಲೆ ಹಲ್ಲೆ ಮಾಡಿ ಹತ್ಯೆಗೈದು ಪರಾರಿಯಾಗಿದೆ.

ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಡಿದ್ದಾರೆ. ಕೊಲೆಯಾದ ವ್ಯಕ್ತಿ ಕೋಣನಕುಂಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೃತ್ಯ ನಡೆದಿರಬಹುದು‌ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ