Breaking News

ಜಾಮೀನು ರಹಿತ ವಾರಂಟ್​​​​​​​ನಿಂದ ರಣ್​ದೀಪ್​ ಸುರ್ಜೇವಾಲಾಗೆ 5 ವಾರ ಬಿಗ್​ ರಿಲೀಫ್​

Spread the love

ನವದೆಹಲಿ : ಕಾಂಗ್ರೆಸ್​ ವಕ್ತಾರ ರಣ್​ದೀಪ್​ ಸುರ್ಜೇವಾಲಾ ಅವರಿಗೆ ಸುಪ್ರೀಂ ಕೋರ್ಟ್​ ಇಂದು ರಿಲೀಫ್​ ನೀಡಿದೆ. 23 ವರ್ಷಗಳ ಹಿಂದಿನ ಪ್ರಕರಣದಲ್ಲಿ ಅವರ ವಿರುದ್ಧ ಜಾರಿಯಾಗಿದ್ದ ಜಾಮೀನು ರಹಿತ ವಾರಂಟ್​​ನಿಂದ ಸರ್ವೋಚ್ಛ ನ್ಯಾಯಾಲಯವು ಐದು ವಾರಗಳ ಕಾಲ ರಕ್ಷಣೆ ನೀಡಿದೆ.

ವಾರಾಣಸಿಯ ವಿಭಾಗೀಯ ಆಯುಕ್ತರ ನ್ಯಾಯಾಲಯ ಮತ್ತು ಕಚೇರಿ ಆವರಣದಲ್ಲಿ ನಡೆದಿದ್ದ ಹಿಂಸಾತ್ಮಕ ಪ್ರತಿಭಟನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 7ರಂದು ವಾರಾಣಸಿಯ ವಿಶೇಷ ನ್ಯಾಯಾಧೀಶರು (ಸಂಸದರು, ಶಾಸಕರ ಪ್ರಕರಣಗಳ ನ್ಯಾಯಾಲಯ) ಜಾಮೀನು ರಹಿತ ವಾರಂಟ್​​ ಹೊರಡಿಸಿದ್ದರು. ನವೆಂಬರ್ 21ರಂದು ನ್ಯಾಯಾಲಯಕ್ಕೆ ಸುರ್ಜೇವಾಲಾ ಹಾಜರು ಆಗಬೇಕೆಂದು ಆದೇಶಿಸಿದ್ದರು.

ಹೀಗಾಗಿ ಸುರ್ಜೇವಾಲಾ ತಮ್ಮ ವಿರುದ್ಧ ಹೊರಡಿಸಿದ್ದ ಜಾಮೀನು ರಹಿತ ವಾರಂಟ್ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ವಿಶೇಷ ನ್ಯಾಯಾಲಯವು ಹೊರಡಿಸಿದ ಜಾಮೀನು ರಹಿತ ವಾರಂಟ್ ಅಡಿ 5 ವಾರಗಳವರೆಗೆ ಸುರ್ಜೇವಾಲಾ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬೇಡಿ ಎಂದು ಆದೇಶಿಸಿದೆ. ಅಷ್ಟೇ ಅಲ್ಲದೇ ಜಾಮೀನು ರಹಿತ ವಾರಂಟ್​ ರದ್ದತಿಗೊಳಿಸುವಂತೆ ವಾರಾಣಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಮುಂದಿನ 4 ವಾರದೊಳಗೆ ಅವರಿಗೆ ಕಾಲಾವಕಾಶ ನೀಡಿ ಕೂಡಾ ಆದೇಶ ಹೊರಡಿಸಿದೆ.

ವಾರಾಣಸಿಯ ವಿಶೇಷ ನ್ಯಾಯಾಧೀಶರು ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 21 ರಂದು ಸುರ್ಜೇವಾಲಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿದ್ದರು. ಜೊತೆಗೆ ದೆಹಲಿ ಪೊಲೀಸ್ ಕಮಿಷನರ್‌ಗೆ ಪತ್ರ ಬರೆದು, ನಿಗದಿತ ದಿನಾಂಕದಂದು ನ್ಯಾಯಾಲಯಕ್ಕೆ ಹಾಜರಾಗುವುದನ್ನು ಖಚಿತಪಡಿಸಿಕೊಳ್ಳುವಂತೆ ಕೋರ್ಟ್​​​​​​​​​ ಸೂಚಿಸಿತ್ತು.

ಇಂದಿನ ಸುಪ್ರೀಂ ವಿಚಾರಣೆ ವೇಳೆ ಸುಜೇವಾಲಾ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ​ಮನು ಸಿಂಘ್ವಿ , 2000ನೇ ಇಸವಿಯಲ್ಲಿ ಈ ಘಟನೆ ನಡೆದಿದ್ದು, 22 ವರ್ಷಗಳ ನಂತರ ಎಂದರೆ 2022ರ ಆಗಸ್ಟ್‌ನಲ್ಲಿ ಸುರ್ಜೇವಾಲಾ ವಿರುದ್ಧ ಸಮನ್ಸ್‌ ಜಾರಿ ಮಾಡಲಾಗಿದೆ ಎಂದು ನ್ಯಾಯಪೀಠದ ಗಮನ ಸೆಳೆದರು. ಮುಂದುವರೆದು ವಾದ ಮಂಡಿಸಿದ ಅವರು, ಯುವ ಕಾಂಗ್ರೆಸ್ ನಾಯಕರಾಗಿದ್ದಾಗ ಸುರ್ಜೇವಾಲಾ ಮಾಡಿದ ಆರೋಪದಿಂದ ರಾಜಕೀಯ ಪ್ರಚೋದನೆಯಿಂದ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು ಎಂದು ಪೀಠದ ಗಮನಕ್ಕೆ ತಂದರು


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ