Breaking News

ಮಂಗಳೂರು: ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ, ಕಾರಣ ನಿಗೂಢ

Spread the love

ಮಂಗಳೂರು: ಬ್ಯಾಂಕ್​ನ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ. ಬ್ಯಾಂಕ್ ಅಧಿಕಾರಿ ವಾದಿರಾಜ್(55) ಆತ್ಮಹತ್ಯೆ ಮಾಡಿಕೊಂಡವರು.

ವಾದಿರಾಜ್ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೆಯವರು ಬಂದು ನೋಡಿದಾಗ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ಸಂಬಂಧಿಕರು ತಿಳಿಸಿದ್ದಾರೆ.

ವಾದಿರಾಜ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದು, ಬೆಳಗ್ಗೆ ಮಕ್ಕಳು ಕಾಲೇಜಿಗೆ ತೆರಳಿದ್ದರು. ಪತ್ನಿ ಕೂಡಾ ಮನೆಯಲ್ಲಿ ಇಲ್ಲದ ವೇಳೆ ಅವರು ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಮಂಗಳೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ