Breaking News

ತೆಲಂಗಾಣದಲ್ಲಿಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಮತಬೇಟೆ

Spread the love

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ತೆಲಂಗಾಣಕ್ಕೆ ತೆರಳಲಿದ್ದಾರೆ.

ಚುನಾವಣಾ ರ‍್ಯಾಲಿಯಲ್ಲಿ ಭಾಗವಹಿಸಲಿರುವ ಅವರು ಕಾಂಗ್ರೆಸ್ ಪರ ಮತಯಾಚನೆ ಮಾಡುವರು. ಬೆಳಿಗ್ಗೆ 11.30ಗಂಟೆಗೆ ಸಿದ್ದರಾಮಯ್ಯ ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಡಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ‌ಮೂಲಕ ಕಾಮರೆಡ್ಡಿ ಜಿಲ್ಲೆಗೆ ತೆರಳುವರು. ಕಾಮರೆಡ್ಡಿ ನಗರದಲ್ಲಿ 2 ಗಂಟೆಗೆ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮತಯಾಚಿಸುವರು. ಸಂಜೆ 6.30ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಡಿ.ಕೆ.ಶಿವಕುಮಾರ್ ಕ್ಯಾಂಪೇನ್: ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ತೆಲಂಗಾಣದ ಕೋದಡ್​ನಲ್ಲಿ ಪ್ರಚಾರ ನಡೆಸಲಿದ್ದಾರೆ. ಶುಕ್ರವಾರ ಮಧ್ಯಾಹ್ನ ಎರಡು ಗಂಟೆಗೆ ಬೆಂಗಳೂರಿನಿಂದ ತೆಲಂಗಾಣಕ್ಕೆ ತೆರಳಿ ಸಂಜೆ 5ಕ್ಕೆ ಚುನಾವಣಾ ಪ್ರಚಾರ ನಡೆಸುವರು. ನಂತರ, ಅಲ್ಲಿಂದ ಹುಜೂರ್ ನಗರಕ್ಕೆ ತೆರಳಿ ರಾತ್ರಿ 8 ಗಂಟೆಗೆ ರೋಡ್ ಶೋ ನಡೆಸುವ ಕಾರ್ಯಕ್ರಮವಿದೆ. ರಾತ್ರಿ ವಿಜಯವಾಡದಲ್ಲಿ ತಂಗಲಿದ್ದಾರೆ.

ರಾಜ್ಯದ 10 ಸಚಿವರು, 48 ಶಾಸಕರಿಗೆ ಟಾಸ್ಕ್: ಕರ್ನಾಟಕದ ಸಚಿವರು ಮತ್ತು ಶಾಸಕರುಗಳನ್ನು ತೆಲಂಗಾಣ ವಿಧಾನಸಭೆ ಚುನಾವಣೆಗೆ ಕ್ಲಸ್ಟರ್ ಉಸ್ತುವಾರಿ ಹಾಗೂ ಕ್ಷೇತ್ರವಾರು ವೀಕ್ಷಕರಾಗಿ ಎಐಸಿಸಿ ಇತ್ತೀಚೆಗೆ ನೇಮಿಸಿದೆ.‌ 10 ಸಚಿವರನ್ನು ಕ್ಲಸ್ಟರ್ ಉಸ್ತುವಾರಿಯಾಗಿ ಮತ್ತು 48 ಶಾಸಕರನ್ನು ಕ್ಷೇತ್ರವಾರು ವೀಕ್ಷಕರಾಗಿ ನೇಮಿಸಲಾಗಿದೆ. ಚುನಾವಣೆಯ ಎಐಸಿಸಿ ಕ್ಲಸ್ಟರ್ ಉಸ್ತುವಾರಿಯಾಗಿ ಸಚಿವರಾದ ದಿನೇಶ್ ಗುಂಡೂರಾವ್, ಪ್ರಿಯಾಂಕ್​ ಖರ್ಗೆ, ಎಂ.ಸಿ.ಸುಧಾಕರ್, ಈಶ್ವರ್ ಖಂಡ್ರೆ, ಶರಣ ಪ್ರಕಾಶ ಪಾಟೀಲ್, ಕೆ.ಹೆಚ್.ಮುನಿಯಪ್ಪ, ಕೃಷ್ಣ ಭೈರೇಗೌಡ, ಜಮೀರ್ ಅಹಮ್ಮದ್ ಖಾನ್, ಶಿವರಾಜ್ ತಂಗಡಗಿ ಮತ್ತು ಬಿ.ನಾಗೇಂದ್ರ ಅವರನ್ನು ನೇಮಿಸಲಾಗಿದೆ.

ಕ್ಷೇತ್ರವಾರು ವೀಕ್ಷಕರಾಗಿ 48 ಕಾಂಗ್ರೆಸ್ ಶಾಸಕರನ್ನು ನೇಮಿಸಲಾಗಿದೆ. ಇವರಲ್ಲಿ ಎಂಎಲ್‌ಸಿ ಉಮಾಶ್ರೀ, ಮಹಂತೇಶ್ ಕೌಜಲಗಿ, ಸಲೀಂ ಅಹಮ್ಮದ್, ಯು.ಬಿ.ವೆಂಕಟೇಶ್, ಅನಿಲ್ ಚಿಕ್ಕಮಾಧು, ಪ್ರಕಾಶ್ ಹುಕ್ಕೇರಿ, ಕೋನಾರೆಡ್ಡಿ, ಯು.ಬಿ.ಬಣಕರ್, ಪ್ರದೀಪ್ ಈಶ್ವರ್, ನಾರಾಯಣ ಸ್ವಾಮಿ, ವಿನಯ್ ಕುಲಕರ್ಣಿ, ಶಿವಣ್ಣ, ಎಂ.ಆರ್.ಸೀತಾರಾಮ್, ಕಂಪ್ಲಿ ಗಣೇಶ್, ಬಸವರಾಜ ರಾಯರೆಡ್ಡಿ ಇದ್ದಾರೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ