Breaking News

ಹೊಸ ಸಂಸತ್​ ಭವನದಲ್ಲಿ ಡಿಸೆಂಬರ್​ 4 ರಿಂದ ಚಳಿಗಾಲದ ಅಧಿವೇಶನ

Spread the love

ನವದೆಹಲಿ: ಪಂಚರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಚಳಿಗಾಲದ ಸಂಸತ್​ ಅಧಿವೇಶನ ಡಿಸೆಂಬರ್​ 4 ರಿಂದ ಆರಂಭವಾಗಲಿದೆ. ಡಿಸೆಂಬರ್ 22 ರವರೆಗೆ ಅಂದರೆ 19 ದಿನಗಳ ಕಾಲ ನಡೆಯಲಿದೆ.

ಇಷ್ಟು ದಿನಗಳಲ್ಲಿ 15 ಕಲಾಪಗಳನ್ನು ನಡೆಸಲು ಕೇಂದ್ರ ಸರ್ಕಾರ ಯೋಜಿಸಿದೆ.

 

 

ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ (ಟ್ವಿಟರ್​) ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ ಅವರು, ಅಮೃತ ಕಾಲದ ಅಧಿವೇಶನದಲ್ಲಿ ಸರ್ಕಾರದ ಕಾರ್ಯಗಳು ಮತ್ತು ಇತರ ವಿಷಯಗಳ ಬಗ್ಗೆ ವಿಸ್ತೃತ ಚರ್ಚೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭಾ ಚುನಾವಣೆಯ ಫಲಿತಾಂಶವು ಡಿಸೆಂಬರ್ 3 ರಂದು ಪ್ರಕಟಿಟವಾಗಲಿದೆ. ಇದಾದ ಮರುದಿನವೇ ಹೊಸ ಸಂಸತ್​ ಭವನದಲ್ಲಿ ಮೊದಲ ಪೂರ್ಣ ಅಧಿವೇಶನ ನಡೆಯಲಿದೆ. ಸಂಸತ್ತಿನ ಚಳಿಗಾಲದ ಅಧಿವೇಶನ ಸಾಮಾನ್ಯವಾಗಿ ನವೆಂಬರ್‌ನಲ್ಲಿ ಪ್ರಾರಂಭವಾಗುತ್ತಿತ್ತು. ಆದರೆ, ಪಂಚ ರಾಜ್ಯಗಳ ಚುನಾವಣೆ ಕಾರಣ ಈ ಬಾರಿ ಡಿಸೆಂಬರ್‌ಗೆ ಮುಂದೂಡಲಾಗಿತ್ತು.

ವಿವಿಧ ಬಿಲ್​ಗಳ ಮಂಡನೆ ಸಾಧ್ಯತೆ: ಐಪಿಸಿ, ಸಿಆರ್‌ಪಿಸಿ ಮತ್ತು ಎವಿಡೆನ್ಸ್ ಆಯಕ್ಟ್ ಅನ್ನು ಬದಲಿಸಲು ಬಯಸುವ ಪ್ರಮುಖ ಮೂರು ಮಸೂದೆಗಳನ್ನು ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸುವ ಸಾಧ್ಯತೆಯಿದೆ. ಜೊತೆಗೆ ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರ ನೇಮಕದ ಮಸೂದೆ ಸೇರಿದಂತೆ ಹಲವು ಬಿಲ್​ಗಳು ಮಂಡನೆಯಾಗುವ ಸಂಭವವಿದೆ.

ಚುನಾವಣಾ ಆಯುಕ್ತರ ಬಿಲ್​ ಅನ್ನು ಮುಂಗಾರು ಅಧಿವೇಶನದಲ್ಲಿ ಮಂಡನೆ ಮಾಡಲಾಯಿತು. ಪ್ರತಿಪಕ್ಷಗಳು ಮತ್ತು ಮಾಜಿ ಮುಖ್ಯ ಚುನಾವಣಾ ಆಯುಕ್ತರ ವಿರೋಧದಿಂದಾಗಿ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಅಂಗೀಕರಿಸಲು ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಈ ತಿದ್ದುಪಡಿ ಕಾಯ್ದೆಯು ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರಿಗೆ ಕ್ಯಾಬಿನೆಟ್‌ ಸಚಿವ ಸ್ಥಾನಮಾನ ನೀಡಲಿದೆ. ಆದರೆ, ಪ್ರಸ್ತುತ ಅವರ ಸ್ಥಾನಮಾನ ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿಗಳಿಗೆ ಸಮಾನವಾಗಿದೆ. ಹೀಗಾಗಿ ಇದರ ವಿರುದ್ಧ ವಿರೋಧ ವ್ಯಕ್ತವಾಗುತ್ತಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ