Breaking News

ಕೆಇಎ ಪರೀಕ್ಷಾ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್​​ನ​ನ್ನು ಕಲಬುರಗಿ ಜಿಲ್ಲೆಯ ವಿಶೇಷ ಪೊಲೀಸ್ ತಂಡ ಮಹಾರಾಷ್ಟ್ರ ಗಡಿಯಲ್ಲಿ ಬಂಧಿಸಿದ್ದಾರೆ.

Spread the love

ಕಲಬುರಗಿ: ಕೆಇಎ ನಡೆಸಿರೋ ಎಫ್‌ಡಿಎ ಪರೀಕ್ಷೆಯಲ್ಲಿ ಅಕ್ರಮ ಎಸೆಗಿರುವ ಆರೋಪ ಎದುರಿಸುತ್ತಿರುವ ಪ್ರಕರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್​ನ್ನು ಕೊನೆಗೂ ಬಂಧನ ಮಾಡಲಾಗಿದೆ.

ಮಹಾರಾಷ್ಟ್ರ ಗಡಿಯಲ್ಲಿ ಕಲಬುರಗಿ ಜಿಲ್ಲೆಯ ವಿಶೇಷ ಪೊಲೀಸ್ ತಂಡದಿಂದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ನನ್ನು ಅರೆಸ್ಟ್​ ಮಾಡಲಾಗಿದೆ. ಆರ್‌ಡಿಪಿಯನ್ನು ಬಂಧಿಸಿದ್ದು, ಕಲಬುರಗಿಗೆ ಕರೆತರುವ ಸಾಧ್ಯತೆ ಇದೆ.

ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕೆಇಎ ಪರೀಕ್ಷಾ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್, ನವೆಂಬರ್​ 6 ರಂದು ಕಲಬುರಗಿ ನಗರದ ವರ್ಧಾ ಲೇಔಟ್‌ನ ಮಹಾಲಕ್ಷ್ಮಿ ಅಪಾರ್ಟ್ಮೆಂಟ್‌ ಹಿಂಭಾಗದ ಕಾಂಪೌಂಡ್ ಹಾರಿ ಎಸ್ಕೆಪ್ ಆಗಿದ್ದ. ಈ ಕಿಂಗ್‌ಪಿನ್ ಬಂಧನಕ್ಕಾಗಿಯೇ ನಾಲ್ವರು ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಬಂಧನದ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.


Spread the love

About Laxminews 24x7

Check Also

ಮಹದಾಯಿ ಯೋಜನೆಗೆ ನಿಮ್ಮ ಮಿತ್ರಪಕ್ಷದ ಗೋವಾ ಸರ್ಕಾರದ ಒಪ್ಪಿಗೆ ತನ್ನಿ: ಹೆಚ್​ಡಿಕೆಗೆ ಪಾಟೀಲ್ ಪ್ರತಿಸವಾಲು

Spread the loveಗದಗ: ”ಗೋವಾದಲ್ಲಿ ನಿಮ್ಮದೇ ಮಿತ್ರಪಕ್ಷದ ಸರ್ಕಾರವಿದೆ. ಮಹದಾಯಿ ಯೋಜನೆಗೆ ಒಪ್ಪಿಗೆ ಕೊಡಿಸಿ. ಗೋವಾದ ಒಪ್ಪಿಗೆ ತೆಗೆದುಕೊಂಡು ಬನ್ನಿ” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ