Home / ರಾಜಕೀಯ / ಬೆಳಗಾವಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ

ಬೆಳಗಾವಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ

Spread the love

ಬೆಳಗಾವಿ : ಚಳಿಗಾಲ ಅಧಿವೇಶನಕ್ಕಿಂತ ಮುಂಚೆ ತುಘಲಕ್ ದರ್ಬಾರ್​​ನ ರೈತ ವಿರೋಧಿ ಆದೇಶಗಳನ್ನು ವಾಪಸ್​ ಪಡೆದು ಮುಖ್ಯಮಂತ್ರಿಗಳು ಬೆಳಗಾವಿಗೆ ಬರಬೇಕು.

ಇಲ್ಲದಿದ್ದರೆ ರೈತರು ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಬೇಕಾಗುತ್ತದೆ. ಅಲ್ಲದೇ ವಿದ್ಯುತ್ ಖಾತೆ ಬಗ್ಗೆ ಜ್ಞಾನವಿಲ್ಲದ ಕೆ. ಜೆ ಜಾರ್ಜ್ ಅವರನ್ನು ಸಂಪುಟದಿಂದ ಕೈ ಬಿಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು.

ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರೈತರ ಸಮಸ್ಯೆಗಳೇ ಗೊತ್ತಿಲ್ಲದ ಕೆ ಜೆ ಜಾರ್ಜ್ ವಿದ್ಯುತ್ ಮಂತ್ರಿ ಆಗಿದ್ದಾರೆ. ಅವರು ಯಾವುದೇ ರೀತಿ ಅಧ್ಯಯನ ಮಾಡಿಲ್ಲ. ಸೋಲಾರ್​ ವಿದ್ಯುತ್ ನೀಡುತ್ತೇವೆ ಎನ್ನುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಶೇ. 80ರಷ್ಟು ಸಬ್ಸಿಡಿ ನೀಡಿದರೂ ಒಂದು ಲಕ್ಷ ರೂ. ಖರ್ಚಾಗುತ್ತದೆ‌. ವಿದ್ಯುತ್ ಸಂಪರ್ಕ ಬೇಕಾದರೆ, 25 ಕಿ. ಲೋ. ವ್ಯಾಟ್ ಟಿಸಿ ತೆಗೆದುಕೊಂಡರೆ 1.50 ಲಕ್ಷ ಮತ್ತು 63 ಕಿ.ಲೋ. ವ್ಯಾಟ್​ಗೆ 2 ಲಕ್ಷ ಖರ್ಚಾಗುತ್ತದೆ. ಈ ರೀತಿ ತುಘಲಕ್ ದರ್ಬಾರ್ ಸರ್ಕಾರ ರಾಜ್ಯದಲ್ಲಿದೆ. 223 ತಾಲೂಕು ಬರಗಾಲ ಪೀಡಿತವಾಗಿದ್ದರೂ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ. ಜಿಲ್ಲಾಡಳಿತಕ್ಕೆ ಒಂದು ರೂ. ಬಿಡುಗಡೆಯಾಗಿಲ್ಲ. 200 ರೈತರೂ ಆತ್ಮಹತ್ಯೆ ಮಾಡಿಕೊಂಡರೂ ರೈತರಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಎಂದು ಈರಣ್ಣ ಕಡಾಡಿ ಹರಿಹಾಯ್ದರು.


Spread the love

About Laxminews 24x7

Check Also

ವಿದ್ಯಾರ್ಥಿಗಳು ಮಾನಸಿಕ ಸದೃಢತೆ ಕಾಪಾಡಿಕೊಂಡು ಅಧ್ಯಯನಕ್ಕೆ ಸಜ್ಜಾಗಿ: ಪ್ರವೀಣ

Spread the love ಅಳ್ನಾವರ: ‘ಒತ್ತಡದ ಬದುಕಿನಲ್ಲಿ ಮಾನಸಿಕ ಸಮತೋಲನ ಕಾಪಾಡಿಕೊಂಡು ಅಧ್ಯಯನಕ್ಕೆ ವಿದ್ಯಾರ್ಥಿಗಳು ಸಜ್ಜಾಗಬೇಕು’ ಎಂದು ಸರ್ಕಾರಿ ಪ್ರಥಮ ದರ್ಜೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ