Breaking News

ಬೌರಿಂಗ್ ಆಸ್ಪತ್ರೆಯ ಡಾ ಶ್ರೀಕಾಂತ್ ಅಮಾನತುಗೊಳಿಸಿ: ಸಚಿವ ಡಾ ಶರಣ ಪ್ರಕಾಶ್ ಪಾಟೀಲ್​ಗೆ ದೂರು

Spread the love

ಬೆಂಗಳೂರು : ರಾಜ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನಡುವೆ ವೈದ್ಯಸೇವೆ ಬಿಟ್ಟು ಡಿ ದರ್ಜೆ ನೌಕರನಂತೆ ಕೆಲಸ ನಿರ್ವಹಣೆ ಮಾಡುತ್ತಿರುವ ಬೌರಿಂಗ್ ಸಂಸ್ಥೆಯ ಡಾ.

ಹೆಚ್. ಎಂ ಶ್ರೀಕಾಂತ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರಿಗೆ ದೂರು ಸಲ್ಲಿಕೆ ಮಾಡಲಾಗಿದೆ.

ನಗರದಲ್ಲಿಂದು ಜನತಾ ಪಕ್ಷದ ಕರ್ನಾಟಕ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಎನ್. ನಾಗೇಶ್ ಅವರು ದೂರು ಸಲ್ಲಿಕೆ ಮಾಡಿದ್ದು, ರಾಜಧಾನಿ ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ(ಬೌರಿಂಗ್) ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಆಗಿ ಸೇವೆ ಸಲ್ಲಿಸದೆ ಡಿ ದರ್ಜೆ ನೌಕರರಂತೆ ಕಡತ ನಿರ್ವಹಣೆಯ ಕೆಲಸದಲ್ಲಿ ತೊಡಗಿರುವ ಡಾ. ಹೆಚ್ ಎಂ ಶ್ರೀಕಾಂತ್ ವಿರುದ್ಧ ಕಾನೂನು ಕ್ರಮ ಕೈಗೊಂಡು, ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಪದವಿ ಮುಗಿದ ನಂತರವೇ ನಿಜವಾದ ಜೀವನ ಆರಂಭ

Spread the loveಮೈಸೂರು: ಶಿಕ್ಷಣ ಮುಗಿದ ನಂತರ ಜೀವನ ಮುಗಿದಂತಾಗುವುದಿಲ್ಲ. ಅದು ನಿಮ್ಮ ಹೊಸ ಪ್ರಯಾಣದ ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ