Breaking News

15 ದಿನಗಳೊಳಗಾಗಿ 100 ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚನೆ: ಸಚಿವ ಕೃಷ್ಣ ಬೈರೇಗೌಡ

Spread the love

ಬೆಂಗಳೂರು: “ತಹಶೀಲ್ದಾರ್ ನ್ಯಾಯಾಲಯದಲ್ಲಿರುವ ತಕರಾರು ಅರ್ಜಿಗಳನ್ನು ಜನವರಿ ಒಳಗಾಗಿ ಸಂಪೂರ್ಣವಾಗಿ ನ್ಯಾಯಯುತ ವಿಲೇವಾರಿ ಮಾಡಬೇಕು.

ಅಧಿಕಾರಿಗಳು ಈ ಸೂಚನೆಯನ್ನು ಪಾಲಿಸದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ಕಂದಾಯ ಇಲಾಖೆಯ ನಾಲ್ಕೂ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಳೆದ ನಾಲ್ಕು ತಿಂಗಳಿನಿಂದಲೂ ಹಲವು ಸೂಚನೆಗಳನ್ನು ನೀಡಿದ್ದಾಗ್ಯೂ ಉತ್ತಮ ನಿರ್ವಹಣೆ ತೋರದ ತಹಶೀಲ್ದಾರ್​ಗಳಿಗೆ ಎಚ್ಚರಿಕೆ ನೀಡಿದ ಸಚಿವರು, “ಜನಸಾಮಾನ್ಯರು ಅವರ ದೈನಂದಿನ ಕೆಲಸ ಬಿಟ್ಟು ದಿನಂಪ್ರತಿ ನಿಮ್ಮ ಕಚೇರಿಗಳಿಗೆ ಅಲೆಯುತ್ತಿರಬೇಕಾ?” ಎಂದು ಪ್ರಶ್ನಿಸಿದರು.

“ಯಾವುದೇ ಪ್ರಕರಣ 90 ದಿನಗಳಲ್ಲಿ ಇತ್ಯರ್ಥಗೊಳ್ಳಬೇಕು ಎಂದು ಕಾನೂನು ಇದ್ದರೂ, ಐದು ವರ್ಷದಷ್ಟು ಹಳೆಯ ಪ್ರಕರಣಗಳೂ ಸಹ ಈವರೆಗೆ ವಿಲೇವಾರಿ ಆಗಿದೆ ಉಳಿಯಲು ಏನು ಕಾರಣ?” ಎಂದು ಪ್ರಶ್ನಿಸಿದರು. “ಜನವರಿಯ ಒಳಗೆ 90 ದಿನಕ್ಕೂ ಹಳೆಯ ಯಾವ ಪ್ರಕರಣಗಳೂ ಉಳಿಯಬಾರದು. ಒಂದು ವೇಳೆ ಅಧಿಕಾರಿಗಳು ಈ ಸೂಚನೆಯನ್ನು ಮೀರಿದಲ್ಲಿ ನೋಟಿಸ್ ಜಾರಿಗೊಳಿಸಲಾಗುವುದು ಹಾಗೂ ಕಠಿಣ ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಸಿದರು.

ಕಳೆದ ನಾಲ್ಕು ತಿಂಗಳಲ್ಲಿ 30 ಸಾವಿರ ಪ್ರಕರಣ ವಿಲೇವಾರಿ: ಸಭೆಯಲ್ಲಿ ಸಮರ್ಥ ಅಧಿಕಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, “ನಮ್ಮ ಸರ್ಕಾರ ಅಧಿಕಾರಕ್ಕೇರಿದ ಸಂದರ್ಭದಲ್ಲಿ ಎಸಿ (ಉಪ ವಿಭಾಗಾಧಿಕಾರಿ) ನ್ಯಾಯಾಲಯದಲ್ಲೇ ಒಟ್ಟು 59,339 ಪ್ರಕರಣಗಳು ಬಾಕಿ ಇದ್ದವು. ಆದರೆ, ಕಳೆದ ನಾಲ್ಕು ತಿಂಗಳ ಅವಧಿಯಲ್ಲೇ ಈ ಪ್ರಕರಣಗಳ ಸಂಖ್ಯೆಯನ್ನು 30 ಸಾವಿರಕ್ಕೆ ಇಳಿಸಲಾಗಿದೆ. ಮುಂದಿನ ಮೂರು ತಿಂಗಳ ಅವಧಿಯಲ್ಲಿ ಈ ಎಲ್ಲಾ ಪ್ರಕರಣಗಳನ್ನೂ ಇತ್ಯರ್ಥಗೊಳಿಸಿ ಶೇ.100 ರಷ್ಟು ಸಾಧನೆ ಮಾಡಬೇಕಿದೆ ಎಂದು ಕಾಲಮಿತಿ” ನೀಡಿದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ