Breaking News

ಮಂಡ್ಯ: ಸಹಪಾಠಿಗಳಿಂದಲೇ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್, ವಿಡಿಯೋ ಮಾಡಿ ಬ್ಲ್ಯಾಕ್​​ಮೇಲ್!

Spread the love

ಮಂಡ್ಯ: 17 ವರ್ಷದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಹಪಾಠಿಗಳೇ ಪುಸಲಾಯಿಸಿ ಕರೆತಂದು ಬಾಲಕಿ ಮೇಲೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಮದ್ದೂರಿನ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಆರೋಪಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಕೃತ್ಯದ ವಿಡಿಯೋ ಮಾಡಿದ್ದಾರೆ. ಬಳಿಕ ಸಂತ್ರಸ್ತೆಯ ಮೊಬೈಲ್‌ಗೆ ವಿಡಿಯೋ ಕಳುಹಿಸಿ ಬೆದರಿಕೆ ಹಾಕಿದ್ದಲ್ಲದೇ ಕರೆದಾಗ ಬರುವಂತೆ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಇದಾದ ನಂತರ ಅಪ್ರಾಪ್ತೆ ನಡೆದ ಘಟನೆ ಬಗ್ಗೆ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದಾಳೆ.

ನಂತರ ಸಂತ್ರಸ್ತೆಯ ಪೋಷಕರು ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿ ಮೇಲೆ ಅತ್ಯಾಚಾರ, ಪೋಕ್ಸೊ, ಆಟ್ರಾಸಿಟಿ ಸೆಕ್ಷನ್ ಅಡಿ ಕೇಸ್ ದಾಖಲಿಸಲಾಗಿದೆ. ಮೂವರು ಆರೋಪಿಗಳನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ