ಬೆಂಗಳೂರು:ಕುಟುಂಬ ರಾಜಕಾರಣ ನನ್ನ ಆಯ್ಕೆಯಲ್ಲ. ಯುವಕರಿಗೆ ಆದ್ಯತೆ ಕೊಡಬೇಕು ಎಂಬ ನಿಟ್ಟಿನಲ್ಲಿ ವರಿಷ್ಠರು ನನಗೆ ಅವಕಾಶವನ್ನು ನೀಡಿದ್ದಾರೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ.
ಮಾಧ್ಯಮದವರ ಜತೆ ಮಾತನಾಡಿದ ಅವರು, ಕುಟುಂಬ ರಾಜಕಾರಣದ ಆಧಾರದಲ್ಲಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡುವುದಿದ್ದರೆ ಕಳೆದ ಮೂರು ತಿಂಗಳ ಹಿಂದೆಯೇ ವರಿಷ್ಠರು ಮಾಡುತ್ತಿದ್ದರು.
ಇದು ಬಿಜೆಪಿ ರಾಜಕಾರಣವಲ್ಲ. ಯುವಕರಿಗೆ ಆದ್ಯತೆ ಕೊಡಬೇಕು ಎಂಬ ನಿಟ್ಟಿನಲ್ಲಿ ನನಗೆ ಅವಕಾಶವನ್ನು ನೀಡಿದ್ದಾರೆ ಎಂದಿದ್ದಾರೆ.
ಶುಕ್ರವಾರವಷ್ಟೇ ದೆಹಲಿಯಿಂದ ವರಿಷ್ಠರು ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ನಾನು ವರಿಷ್ಠರಿಗೆ ಅಭಾರಿಯಾಗಿದ್ದೇನೆ. ಪಕ್ಷ ಸಂಘಟನೆಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. ಪಕ್ಷದ ಹಿರಿಯರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕಾದ ಜವಾಬ್ದಾರಿ ನನ್ನ ಮೇಲೆ ಇದೆ ಎಂದು ಹೇಳಿದರು.