Breaking News

ರಾಜ್ಯಾಧ್ಯಕ್ಷರ ಆಯ್ಕೆ ಮಾಡುವ ವಿಚಾರದಲ್ಲಿ ಬಿಜೆಪಿ‌ ಫೇಲ್: ಜಗದೀಶ್ ಶೆಟ್ಟರ್​

Spread the love

ಹುಬ್ಬಳ್ಳಿ: ”ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯು ಅತ್ತು ಕರೆದು ಮಾಡಿರೋ ತರಹ ಕಾಣುತ್ತಿದೆ. ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಆದ್ರೆ, ಇವಗ್ಯಾಕೆ ಆಯ್ಕೆ ಮಾಡಿದ್ರು” ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ಪ್ರಶ್ನಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ರಾಜಕೀಯ ಪಕ್ಷ ಆಗಿ ತಕ್ಷಣವೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿತ್ತು. ಆದ್ರೆ ಬಿಜೆಪಿ‌ ಈ ವಿಚಾರದಲ್ಲಿ ಸಂಪೂರ್ಣ ಫೇಲ್ ಆಗಿದೆ” ಎಂದರು. ಲಿಂಗಾಯತ ನಾಯಕರಿಗೆ ಮಣೆ ಹಾಕಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ”ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ. ಅಂತೂ ಆರು ತಿಂಗಳ ಮೇಲೆ ಅಧ್ಯಕ್ಷರನ್ನು ಮಾಡಿದ್ದಾರೆ. ನಾನು ಕಾಂಗ್ರೆಸ್​ನಲ್ಲಿ ಇದ್ದಿನಿ, ಅಧ್ಯಕ್ಷರ ಆಯ್ಕೆ ಅವರ ಪಕ್ಷಕ್ಕೆ ಬಿಟ್ಟ ವಿಚಾರ” ಎಂದು ಹೇಳಿದರು.

”ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಬಲಾಢ್ಯವಾಗಿ ಬೆಳೆದಿದೆ. ಉತ್ತಮವಾಗಿ ಕೆಲಸ ಮಾಡುತ್ತಿದೆ. ಬಹಳ ದಿನಗಳ ನಂತರ ಬಿಜೆಪಿ ರಾಜ್ಯಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಸದ್ಯ ಬಿಜೆಪಿ ನಾಯಕರು ಭ್ರಮೆಯಲ್ಲಿದ್ದಾರೆ. ಈಗಾಗಲೇ ಬೇರೆ ಕಡೆ ಆಪರೇಷನ್ ಕಮಲ ಮಾಡಲು ಹೋಗಿ ಕೈ ಸುಟ್ಟುಕೊಂಡಿದ್ದಾರೆ. 50 ರಿಂದ 60 ಶಾಸಕರನ್ನು ಕರೆದುಕೊಂಡು ಬಂದು ಮತ್ತೆ ಸರ್ಕಾರ ರಚನೆ ಮಾಡುವ ಭ್ರಮೆಯಲ್ಲಿ ಇದ್ದರು. ಆದ್ರೆ ಈ ಕಾರ್ಯ ಸಾಧ್ಯಗಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಹಿಂದೆ ಏನೇ ಇರಲಿ, ಅದಕ್ಕೆ ಜನ ಉತ್ತರ ನೀಡುತ್ತಾರೆ” ಎಂದ ಅವರು, ಈಗ ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದಾರೆ. ಪವರ್ ಶೇರಿಂಗ್ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಅದು ಕೇವಲ ಚರ್ಚೆಗೆ ಸೀಮಿತವಾಗಿದೆ. ಪಂಚ ರಾಜ್ಯದ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪರವಾಗಿ ಇರುತ್ತದೆ” ಎಂದು ಶೆಟ್ಟರ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ