ಪಂಚರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯದಲ್ಲಿ ಬಿಜೆಪಿ ಬಹುಮತದೊಂದಿಗೆ ಆಡಳಿತಕ್ಕೆ ಬರುತ್ತದೆ ಎಂದ ಪ್ರಹ್ಲಾದ್ ಜೋಶಿ

Spread the love

ಹುಬ್ಬಳ್ಳಿ : ಪಂಚರಾಜ್ಯ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ ಈ ಮೂರು ರಾಜ್ಯದಲ್ಲಿ ಬಿಜೆಪಿ ಬಹುಮತದೊಂದಿಗೆ ಆಡಳಿತಕ್ಕೆ ಬರುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈಗಾಗಲೇ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಜನರಿಗೆ ಮಾಡಿದ ಮೋಸದಂತೆ ರಾಜಸ್ಥಾನದಲ್ಲಿ ಮಾಡಿದ್ದಾರೆ” ಎಂದು ಕಿಡಿಕಾರಿದರು.

“ಕರ್ನಾಟಕ ಸರ್ಕಾರ ಉಚಿತದ ಹೆಸರಿನಲ್ಲಿ ಹೇಳೋದು ಒಂದು ಮಾಡೋದು ಒಂದು ರೀತಿ. ಎಲ್ಲಾ ಅಭಿವೃದ್ಧಿ ಚಟುವಟಿಕೆಗಳು ಕುಂಠಿತಗೊಂಡಿವೆ. ಈ ಬಗ್ಗೆ ಕಾಂಗ್ರೆಸ್ ಶಾಸಕರೇ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಜನರು ರಸ್ತೆ, ಆಸ್ಪತ್ರೆ ಬಗ್ಗೆ ಬೇಡಿಕೆ ಇಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಶಾಸಕರು ಮಾತ್ರ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ” ಎಂದರು.


Spread the love

About Laxminews 24x7

Check Also

ದೀಪಾವಳಿ ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಾಧ್ಯತೆ

Spread the love ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್‌ 26ರ ಮುನ್ನ ನಡೆಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ