Breaking News

ಮನೆಗೆ ವಿದ್ಯುತ್ ಕಂಬದಿಂದ ಅಕ್ರಮ ಕರೆಂಟ್ ಸಂಪರ್ಕ ಪಡೆದ :H.D.K.

Spread the love

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು.

ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್​​ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ರಾಜ್ಯ ಕಾಂಗ್ರೆಸ್ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ ಎಂದು ತಿರುಗೇಟು ನೀಡಿದ್ದಾರೆ.

 

 

ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದು ಹೆಚ್​ಡಿಕೆ ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಆರೋಪ : ಇದಕ್ಕೂ ಮುನ್ನ ಕಾಂಗ್ರೆಸ್ ಎ​ಕ್ಸ್​ನಲ್ಲಿ ಪೋಸ್ಟ್ ಮಾಡಿ, ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ! ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

 


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ