Breaking News

ನಿಮ್ಹಾನ್ಸ್​ನಲ್ಲಿ 161 ನರ್ಸಿಂಗ್​​ ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಕೆಗೆ ಇನ್ನೆರಡೇ ದಿನ ಬಾಕಿ

Spread the love

ಇನ್ನು ಅರ್ಜಿ ಸಲ್ಲಿಕೆ ಮಾಡದ ಅಭ್ಯರ್ಥಿಗಳಿಗೆ ಎರಡು ದಿನವಷ್ಟೇ ಅವಕಾಶ ಇದ್ದು, ಬೇಗ ಅರ್ಜಿ ಸಲ್ಲಿಸಬಹುದಾಗಿದೆ.

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ- ನಿಮ್ಹಾನ್ಸ್ (NIMHANS)ನಲ್ಲಿ ಖಾಲಿ ಇರುವ 161 ಹುದ್ದೆ ನರ್ಸ್​​​ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದೆ.

ಕಳೆದ ತಿಂಗಳು ಸಂಸ್ಥೆಯಿಂದ ಬಿಎಸ್ಸಿ ಮತ್ತು ಮಿಡ್​ವೈಫ್​ ನರ್ಸ್​​ಗಳ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ನವೆಂಬರ್​ 18 ಕಡೆಯ ದಿನ ಆಗಿದೆ. ಈ ಹುದ್ದೆ ಕುರಿತಾದ ವಿವರ ಇಲ್ಲಿದ್ದು, ಇನ್ನು ಅರ್ಜಿ ಸಲ್ಲಿಕೆ ಮಾಡದ ಅಭ್ಯರ್ಥಿಗಳಿಗೆ ಎರಡೇ ದಿನ ಬಾಕಿ ಇದ್ದು, ಬೇಗ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತ ವಿವರ ಇಲ್ಲಿದೆ.

 ಅಧಿಸೂಚನೆಹುದ್ದೆ ವಿವರ: ನಿಮ್ಹಾನ್ಸ್​​ನಲ್ಲಿ ಖಾಲಿ ಇರುವ ಒಟ್ಟು 161 ನರ್ಸಿಂಗ್​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಆಕಾಂಕ್ಷಿಗಳು ಅಧಿಕೃತ ನರ್ಸಿಂಗ್​ ಮಂಡಳಿಗಳಿಂದ ಬಿಎಸ್ಸಿ ನರ್ಸಿಂಗ್​ ಪದವಿ ಪಡೆದಿರಬೇಕು. ರಾಜ್ಯ ಅಥವಾ ಭಾರತೀಯ ನರ್ಸಿಂಗ್​ ಮಂಡಳಿಯಿಂದ ನರ್ಸ್​ ಅಥವಾ ಮಿಡ್​ವೈಫ್​ ನೋಂದಣಿ ಹೊಂದಿರಬೇಕು.

ಅನುಭವ: ಹುದ್ದೆ ಆಕಾಂಕ್ಷಿಗಳು 50 ಹಾಸಿಗೆಯುಳ್ಳ ಆಸ್ಪತ್ರೆಗಳಲ್ಲಿ ಎರಡು ವರ್ಷ ನರ್ಸಿಂಗ್​ ಕೆಲಸ ನಿರ್ವಹಣೆ ಮಾಡಿದ ಅನುಭವ ಹೊಂದಿರಬೇಕು.

ವೇತನ: ಈ ಹುದ್ದೆಗಳಿಗೆ 9,300 ದಿಂದ 34,800 ರೂ. ವರೆಗೆ ಮಾಸಿಕ ವೇತನ ನಿಗದಿ ಮಾಡಲಾಗಿದೆ.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 35 ವರ್ಷ ವಯಸ್ಸಿನೊಳಗಿರಬೇಕು. ಕೇಂದ್ರ ಸರ್ಕಾರದ ನಿಯಮದ ಅನುಸಾರ ಮೀಸಲು ಹೊಂದಿರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಪರಿಶೀಲಿಸಿ ಮುಂದುವರೆಯಬೇಕು. ಅಗತ್ಯ ದಾಖಲಾತಿ ಮತ್ತು ಪ್ರಮಾಣ ಪತ್ರ ಸೇರಿದಂತೆ ಮತ್ತಿತರ ವಿವರದೊಂದಿಗೆ ಅರ್ಜಿ ಶುಲ್ಕವನ್ನು ಭರಿಸಬೇಕಿದೆ.

ಈ ಹುದ್ದೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 885 ರೂ. ಅರ್ಜಿ ಶುಲ್ಕ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 1,180 ರೂ. ಅರ್ಜಿ ಶುಲ್ಕ ಭರಿಸಬೇಕಿದೆ. ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಅಕ್ಟೋಬರ್​ 18 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕಡೆಯ ದಿನಾಂಕ ನವೆಂಬರ್​ 18 ಆಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು nimhans.ac.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ