ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ಟಿಕೆಟ್‌ಗಳ ಮಾರಾಟ ಪ್ರಕ್ರಿಯೆ ಆಫ್‌ಲೈನ್‌ನಲ್ಲಿ ಪ್ರಾರಂಭವಾಗಿದ್ದು, ಖರೀದಿಗೆ ಯುವಜನತೆ ಮುಗಿಬಿದ್ದ ದೃಶ್ಯ ಕಂಡುಬಂತು.
ವಿಶಾಖಪಟ್ಟಣಂ(ಆಂಧ್ರಪ್ರದೇಶ): ನಗರದಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದ ಟಿಕೆಟ್‌ಗಳ ಮಾರಾಟ ಆಫ್‌ಲೈನ್‌ನಲ್ಲಿ ಶುರುವಾಗಿದೆ.
ಇದೇ ತಿಂಗಳ 23ರಂದು ನಗರದ ಎಸಿಎ-ವಿಡಿಸಿಎ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಆನ್‌ಲೈನ್ ಟಿಕೆಟ್‌ಗಳ ಮಾರಾಟ ಈಗಾಗಲೇ ಪೂರ್ಣಗೊಂಡಿದೆ. ಇಂದಿನಿಂದ ಆಫ್‌ಲೈನ್‌ನಲ್ಲಿ ಸೇಲ್ ನಡೆಯುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ಕೌಂಟರ್‌ಗಳತ್ತ ಮುಗಿಬಿದ್ದರು.
ಟಿಕೆಟ್‌ಗಾಗಿ ಸರತಿ ಸಾಲಿನಲ್ಲಿ ನಿಂತ ಯುವಜನತೆಮಧುರವಾಡದ ಕ್ರಿಕೆಟ್ ಸ್ಟೇಡಿಯಂ ಜತೆಗೆ ಪುರಸಭೆ ಕ್ರೀಡಾಂಗಣ ಹಾಗೂ ಗಾಜುವಾಕ ಒಳಾಂಗಣ ಕ್ರೀಡಾಂಗಣದಲ್ಲಿ ಟಿಕೆಟ್ ಮಾರಾಟ ಮಾಡಲಾಗುತ್ತಿದೆ. ₹600, ₹1,500, ₹2,000, ₹3,000 ಮತ್ತು ₹5,000 ದರಗಳಲ್ಲಿ ಟಿಕೆಟ್‌ಗಳು ಲಭ್ಯವಿವೆ. ಟಿಕೆಟ್ ಖರೀದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ದುಂಬಾಲು ಬಿದ್ದಿದ್ದಾರೆ. ಟಿಕೆಟ್ ತ್ವರಿತವಾಗಿ ಪಡೆಯಲು ಗುರುವಾರ ರಾತ್ರಿ ಕೆಲವು ಯುವಕರು ಕ್ರೀಡಾಂಗಣದ ಸುತ್ತಲಿನ ಪ್ರದೇಶಗಳಲ್ಲಿ ಮಲಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಮಹಿಳೆಯರೂ ಕೂಡಾ ಸಹ ಸರತಿ ಸಾಲಿನಲ್ಲಿ ಬಂದು ಟಿಕೆಟ್‌ಗಾಗಿ ಪೈಪೋಟಿ ನಡೆಸುತ್ತಿದ್ದರು.
Laxmi News 24×7