Breaking News

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 71 ‘ಪೊಲೀಸ್ ಇನ್ಸ್ ಪೆಕ್ಟರ್’ ಗಳ ವರ್ಗಾವಣೆ

Spread the love

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 71 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಆದೇಶ ಹೊರಡಿಸಿದ್ದು ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ.

 

ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ವರ್ಗಾಯಿಸಲಾದ ಸ್ಥಳದ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸುವುದು ಹಾಗೂ ಬಿಡುಗಡೆಗೊಂಡ ಮತ್ತು ವರದಿ ಮಾಡಿದ ಬಗ್ಗೆ ಈ ಕಛೇರಿಗೆ ಪಾಲನಾ ವರದಿ ಸಲ್ಲಿಸುವುದು.ಮೇಲ್ಕಂಡ ವರ್ಗಾವಣೆ ಆದೇಶದಲ್ಲಿ ಸ್ಥಳ ನಿಯುಕ್ತಿಗೊಳಿಸದೆ ಇರುವ ಪಿ.ಐ.(ಸಿವಿಲ್) ವೃಂದದ ಅಧಿಕಾರಿಗಳು ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಛೇರಿಯಲ್ಲಿ ವರದಿ ಮಾಡಿಕೊಳ್ಳುವುದು ಎಂದು ಸೂಚನೆ ನೀಡಿದ್ದಾರೆ.

ವರ್ಗಾವಣೆಗೊಂಡ ಪೊಲೀಸ್ ಅಧಿಕಾರಿಗಳ ಪಟ್ಟಿ


Spread the love

About Laxminews 24x7

Check Also

ಸರ್ಕಾರಕ್ಕೆ 4,416 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹ: ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಗೆ ಪಣ, ಗಡಿಯಲ್ಲಿ ಕಟ್ಟೆಚ್ಚರ

Spread the loveಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಕಳ್ಳಭಟ್ಟಿ ಮತ್ತು ಕಲಬೆರೆಕೆ ಸೇಂದಿ ಹಾಗೂ ಮಾದಕ ವಸ್ತುಗಳ (ಗಾಂಜಾ ಮತ್ತು ಇತರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ