Breaking News

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

Spread the love

ಕಲಬುರಗಿ: ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆಗೈದ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ರಾಠೋಡ ಜೊತೆಗಿದ್ದ ಆಪ್ತ ಸಹಾಯಕನಿಗೂ ಗಾಯಗಳಾಗಿದೆ. ಇಬ್ಬರನ್ನೂ ಕಲಬುರಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

ಚಿತ್ತಾಪುರ ತಾಲೂಕಿನ ಶಂಕರ್‌ವಾಡಿ ಬಳಿ ಘಟನೆ ನಡೆದಿದೆ. ಮಾಲಗತ್ತಿ ಬಳಿಯ ನ್ಯಾಷನಲ್ ಹೈವೆ ಸಮೀಪದ ತಮ್ಮ ಫಾರಂಹೌಸ್​ನಿಂದ ತಡರಾತ್ರಿ ಕಲಬುರಗಿಗೆ ಬರುತ್ತಿದ್ದಾಗ ಮಾರ್ಗಮಧ್ಯೆ ಶಂಜರ್ ವಾಡಿ ಬಳಿ ದುಷ್ಕರ್ಮಿಗಳು ಮದ್ಯದ ಬಾಟಲಿ, ಕಲ್ಲು ತೂರಿ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಮಣಿಕಂಠ ಅವರ ತಲೆ, ಕಿವಿ, ಕೈಗಳಿಗೆ ಗಾಯಗಳಾಗಿವೆ. ಆಪ್ತಸಹಾಯಕ ಶ್ರೀಕಾಂತ್ ಸುಲೇಗಾಂವ ಅವರಿಗೆ ಚಿಕ್ಕಪುಟ್ಟ ಗಾಯಗಳಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಿಂದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮಣಿಕಂಠ ರಾಠೋಡ ಸೋಲು ಅನುಭವಿಸಿದ್ದರು. ಇತ್ತೀಚೆಗೆ ಚಿತ್ತಾಪುರ ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಬಿಜೆಪಿ ಮುಖಂಡ ರಾಜು ಮುಕ್ಕಣ್ಣ ಅವರನ್ನು ಚಿಕಿತ್ಸೆಗೆಂದು ಕರೆದುಕೊಂಡು ಹೋಗಿ, ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕುರಿತು ಧ್ವನಿ ಎತ್ತಿದ್ದರು. ಸರ್ಕಾರಿ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಅವರ ವಿರುದ್ಧ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಮೊಹಿಯುದ್ದಿನ್ ಮುಬಾಶಿರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಮಣಿಕಂಠ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ