Breaking News

600 ಕೋಟಿ ರೂ. ಭ್ರಷ್ಟಾಚಾರ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

Spread the love

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ (Department of Women and Child Welfare) 600 ಕೋಟಿ ರೂ.ಗಿಂತಲೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲ ನಟರಾಜ್ ಶರ್ಮಾ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ (Lakshmi Hebbalkar) ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ ನಡೆದಿದೆ. ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ (Nutritious Food) ಸರಬರಾಜಿನಲ್ಲಿ ಅವ್ಯವಹಾರ ನಡೆದಿದೆ. ಅನರ್ಹಗೊಂಡಿರೋ ಸಹಕಾರ ಸಂಸ್ಥೆಗಳಿಂದ ಅಂಗನವಾಡಿಗಳಿಗೆ ಪೌಷ್ಠಿಕ ಆಹಾರ ಪೂರೈಕೆ ಮಾಡುವ ಟೆಂಡರ್ ನೀಡಿದ್ದಾರೆ. ಬ್ಲಾಕ್ ಲೀಸ್ಟ್ ನಲ್ಲಿರುವ ಕ್ರಿಸ್ಟಿ ಫ್ರೈಡ್ ಗ್ರಾಮ್ ಕಂಪನಿ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಇಲಾಖೆ ಅಧಿಕಾರಿಗಳು ಶಾಮೀಲಾಗಿ ಈ ಟೆಂಡರ್ ನೀಡಿದ್ದಾರೆ ಎಂದು ವಕೀಲರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.ಗುತ್ತಿಗೆದಾರರಿಂದ ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಗುಣಮಟ್ಟ ಇರುವುದಿಲ್ಲ. ಹೀಗಾಗಿ ಸ್ಥಳೀಯ ಸೇವಾ ಸಂಘಸಂಸ್ಥೆಗಳಿಂದಲೇ ಆಹಾರ ಪೂರೈಕೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಆದ್ರೆ ಸಚಿವರು ಕೋರ್ಟ್ ಆದೇಶ ಉಲ್ಲಂಘನೆ ಮಾಡಿದ್ದಾರೆ. ಬ್ಲಾಕ್‌ ಲಿಸ್ಟ್‌ನಲ್ಲಿರುವ ಕಂಪನಿಗೆ ಆಹಾರ ಪೂರೈಕೆ ಮಾಡಲು ಟೆಂಡರ್ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ

ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನಕಾರ್ಯದರ್ಶಿ ಜೆ.ಸಿ ಪ್ರಕಾಶ್ ಹಾಗೂ ನಿರ್ದೇಶಕರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಅಕ್ರಮವಾಗಿ ಟೆಂಡರ್ ನೀಡುವ ಮೂಲಕ ಕಂಪನಿಗಳಿಂದ ಲಕ್ಷ್ಮಿ ಹೆಬ್ಬಾಳ್ಕರ್ 10% ಕಮಿಷನ್ ಸಹ ಪಡೆದಿದ್ದಾರೆ ಎಂಬುದಾಗಿಯೂ ದೂರಿನಲ್ಲಿ ತಿಳಿಸಿದ್ದಾರೆ.

 


Spread the love

About Laxminews 24x7

Check Also

ಇದೆಲ್ಲಾ ಇ.ಡಿ ಪಿತೂರಿ, ನನ್ನದೇನೂ ತಪ್ಪಿಲ್ಲ ಎಂದ ನಾಗೇಂದ್ರ.!

Spread the love ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ಹಗರಣ ಪ್ರಕರಣಕ್ಕೆ ಸಂಬಂಧಸಿದಂತೆ ಮಾಜಿ ಸಚಿವ ನಾಗೇಂದ್ರ ಜೈಲಿನಿಂದ ಹೊರಬಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ