Breaking News
High Court of Karntaka, Bangalore

ರಾಯಬಾಗ ಶಾಲೆಯ ಕೊಳವೆಬಾವಿಯಲ್ಲಿ ಕಲುಷಿತ ನೀರು: ಸರ್ಕಾರಕ್ಕೆ ಹೈಕೋರ್ಟ್​​ ನೋಟಿಸ್

Spread the love

ಬೆಂಗಳೂರು: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹುಬ್ಬಾರವಾಡಿ ಗ್ರಾಮದಲ್ಲಿ ಖಾಸಗಿ ಕಂಪೆನಿಯೊಂದರ ರಾಸಾಯನಿಕ ಗೊಬ್ಬರ ಸಂಗ್ರಹಣಗಾರದಿಂದಾಗಿ ಪಕ್ಕದಲ್ಲಿರುವ ಪ್ರಾಥಮಿಕ ಮತ್ತು ಅಂಗನವಾಡಿ ಕೇಂದ್ರದ ಕೊಳವೆಬಾವಿಯ ನೀರು ಕಲುಷಿತಗೊಳ್ಳುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸ್ಥಳೀಯ ನಿವಾಸಿ ಪಾಂಡುರಂಗ ಮಹದೇವ ಕಾಂಬ್ಳೆ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನೋಟಿಸ್​ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಅಲ್ಲದೇ, ಇದೊಂದು ಸಾರ್ವಜನಿಕ ಮಹತ್ವದ ಗಂಭೀರ ವಿಚಾರವಾಗಿದೆ. ಅರ್ಜಿ ಸಂಬಂಧ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯದರ್ಶಿ, ರಾಯಬಾಗ ತಹಸೀಲ್ದಾರ್, ಚಿಕ್ಕೋಡಿ ಎಕ್ಸಿಕ್ಯೂಟಿವ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಯಬಾಗ ಉಪವಿಭಾಗ, ರಾಯಬಾಗ ಸಿಡಿಪಿಒ, ರಾಯಬಾಗ ಬಿಇಒ, ಹುಬ್ಬಾರವಾಡಿ ಪಿಡಿಒ, ರಾಯಬಾಗ ತಾಪಂ ಇಒ, ಎಕ್ಸಿಕ್ಯೂಟಿಟ್ ಇಂಜಿನಿಯರ್ ಹೆಸ್ಕಾಂ ಮತ್ತು ಗಂಗಾ ಕಾವೇರಿ ಗೋದಾವರಿ ಫರ್ಟಿಲೈಸರ್ಸ್‌ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ನೋಟಿಸ್ ಜಾರಿಗೊಳಿಸಿದೆ. ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿ ವಿಚಾರಣೆ ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಗಂಗಾ ಕಾವೇರಿ ಗೋದಾವರಿ ಫರ್ಟಿಲೈಸರ್ಸ್‌ ಪ್ರೈವೇಟ್ ಲಿಮಿಟೆಡ್ ಕಂಪನಿ ರಾಸಾಯನಿಕ ಗೊಬ್ಬರ ಸಂಗ್ರಹಣಗಾರ (ಗೋದಾಮಿ) ಕಳೆದ ಏಳು ವರ್ಷಗಳಿಂದ ಹುಬ್ಬಾರವಾಡಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಗೋದಾಮಿನ ಕಾಂಪೌಂಡ್‌ಗೆ ಹೊಂದಿಕೊಂಡು ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಕೇಂದ್ರ ಇದೆ. ಇದರಲ್ಲಿ 500 ಮಕ್ಕಳು ಕಲಿಯುತ್ತಿದ್ದಾರೆ. ಗೋದಾಮಿನ ಹತ್ತಿರ ಸಾರ್ವಜನಿಕ ಬೋರ್‌ವೆಲ್ ಇದೆ. ಹುಬ್ಬಾರವಾಡಿ ಗ್ರಾಮ ಮತ್ತು ಶಾಲೆಗೆ ಅದು ಏಕೈಕ ನೀರಿನ ಮೂಲವಾಗಿದೆ.


Spread the love

About Laxminews 24x7

Check Also

ಜಾತಿ ನಿಂದನೆ ಆರೋಪದಡಿ ವಕೀಲ ಕೆ.ಎನ್​​​. ಜಗದೀಶ್​​​​ ಬಂಧನ

Spread the love ಬೆಂಗಳೂರು: ಜಾತಿ ನಿಂದನೆ ಆರೋಪದಡಿ ಬಿಗ್​ಬಾಸ್​​​ ಮಾಜಿ ಸ್ಪರ್ಧಿ, ವಕೀಲ ಕೆ.ಎನ್​. ಜಗದೀಶ್​​ ಅವರನ್ನು ಕೊಡಿಗೆಹಳ್ಳಿ ಠಾಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ