ರಾಮನಗರ: ಚನ್ನಪಟ್ಟಣದಲ್ಲಿ 1500 ಕ್ವಿಂಟಾಲ್ ಅಕ್ಕಿ ಗೋಲ್ ಮಾಲ್ ಆಗಿರುವುದು ಬೆಳಕಿಗೆ ಬಂದಿದೆ. ಚನ್ನಪಟ್ಟಣ ತಾಲೂಕಿನ 65 ನ್ಯಾಯಬೆಲೆ ಅಂಗಡಿಗೆ ಸಗಟು ಪಡಿತರ ಧಾನ್ಯ ವಿತರಣೆ ಮಾಡುತ್ತಿದ್ದ ಟಿಎಪಿಸಿಎಂಎಸ್ ಗೋದಾಮಿನಲ್ಲಿ ಅಪಾರ ಪ್ರಮಾಣದ ಅಕ್ಕಿ ನಾಪತ್ತೆಯಾಗಿದೆ.
ಗೋದಾಮಿನ ಸಿಬ್ಬಂದಿಯಿಂದ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗೋದಾಮು ನಿರ್ವಹಣೆ ಮಾಡುತ್ತಿದ್ದ ನೌಕರನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಸ್ಥಳಕ್ಕೆಅಹಾರ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. 50 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಅಕ್ಕಿ ಕಳವಾಗಿದೆ ಎಂದು ಹೇಳಲಾಗಿದೆ.