Breaking News

ಜಾತಿಗಣತಿ ವರದಿ: ಬರೀ ಊಹೆಗಳ ಮೇಲೆ ಮಾತನಾಡುವುದು ಸರಿಯಲ್ಲ, ಬಿಜೆಪಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ- ಸಿದ್ದರಾಮಯ್ಯ

Spread the love

ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಾಗಲಕೋಟೆ: ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ.

ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಾಗಲಕೋಟೆಯ ನವನಗರದ ಹೆಲಿಪ್ಯಾಡಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಸಲ್ಲಿಕೆಯಾದ ನಂತರ ನೋಡೋಣ. ಸುಮ್ಮನೆ ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು. ಜಾತಿ ಜನಗಣತಿ ಸಮಾಜವನ್ನು ಒಡೆಯುತ್ತದೆ ಎಂದಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಅವರಿಗೆ ವರದಿಯಲ್ಲಿ ಏನಿದೆ ಎಂದು ಗೊತ್ತಿದೆಯೇ?

ಎಂದು ಪ್ರಶ್ನಿಸಿದರು. ಯಾರೇ ಆಗಲಿ ಗೊತ್ತಿಲ್ಲದೆ ಮಾತನಾಡ ಬಾರದು. ಸಮಾಜವನ್ನು ಏಕೆ ಒಡೆಯುತ್ತೇವೆ? ನಿತೀಶ್ ಕುಮಾರ್ ಬಿಹಾರದಲ್ಲಿ ಜಾತಿಗಣತಿ ಸ್ವೀಕರಿಸಿದ್ದಾರೆ.

ಸಮಾಜ ಒಡೆದುಬಿಟ್ಟರೆ?ಯಾವುದೇ ಹೇಳಿಕೆ ನೀಡುವಾಗ ಅದು ಸತ್ಯಾಂಶದ ಮೇಲೆ ಅವಲಂಬಿತವಾಗಿರಬೇಕು ಎಂದರು. ಮೂಲ ವರದಿ ಕಳೆದಿದೆ ಎಂದು ಹಾಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಯಪ್ರಕಾಶ್ ಹೆಗ್ಡೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ, ಹೆಗ್ಡೆ ಅವರನ್ನು ಕರೆದು ಮಾತನಾಡುತ್ತೇನೆ ಎಂದು ತಿಳಿಸಿದರು. ಬಿಜೆಪಿಯಲ್ಲಿ ಬೆಂಕಿ ಹತ್ತಿಕೊಂಡಿದೆ: ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರನವರನ್ನು ಅಧ್ಯಕ್ಷರನ್ನಾಗಿ ಹಾಗೂ ಆರ್.ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ನೇಮಿಸಿದ ಮೇಲೆ ಬೆಂಕಿ ಹತ್ತಿಕೊಂಡಿದೆ. ಬಹಳಷ್ಟು ಜನರಿಗೆ ಅಸಮಾಧಾನವಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ