Breaking News

ರಾಜ್ಯ ಸರ್ಕಾರದಿಂದ ದರೋಡೆಕೋರರ ರಕ್ಷಣೆ:H.D.K.

Spread the love

ಬೆಂಗಳೂರು: ದರೋಡೆಕೋರರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ನಿಂತಿದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಜೆ.ಪಿ.ನಗರದ ತಮ್ಮ ನಿವಾಸದ ಬಳಿ ಇಂದು ಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ತನಿಖೆಗಾಗಿ ಸಿಬಿಐಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್​ ಪಡೆದ ವಿಚಾರಕ್ಕೆ ಅವರು ಖಾರವಾಗಿ ಪ್ರತಿಕ್ರಿಯಿಸಿದರು.

ಈ ಸರ್ಕಾರದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಮಾತನಾಡುವುದು ಬಹಳ ಇದೆ. ಚರ್ಚೆ ಮಾಡೋಣ, ಇದರ ಬಗ್ಗೆ ಆತುರ ಬೇಡ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚು ಮಾತು ಬೇಡ ಎಂದರು.

ಮರ್ಯಾದೆ ಇರುವವರು ಹೆದರುತ್ತಾರೆ, ಮರ್ಯಾದೆ ಇಲ್ಲದವರಿಗೆ ಕೋರ್ಟ್​ನಲ್ಲಿದ್ದರೆ ಏನು, ಯಾವುದರಲ್ಲಿದ್ದರೆ ಏನು?. ಯಾವುದನ್ನು ಬೇಕಾದರೂ ಕೊಂಡುಕೊಳ್ಳುತ್ತೇವೆ ಎನ್ನುವ ದುರಂಹಕಾರದಲ್ಲಿರುವವರಿಗೆ ಏನು ಹೇಳುವುದು ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ