Breaking News

ನ. 27 ರಂದು ಸಿಎಂ ಸಿದ್ದರಾಮಯ್ಯ (CM Siddaramaiah) ಬೆಳಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ

Spread the love

ಬೆಂಗಳೂರು : ನ. 27 ರಂದು ಸಿಎಂ ಸಿದ್ದರಾಮಯ್ಯ (CM Siddaramaiah) ಬೆಳಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ (Janata Darshana) ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದರು.

ಇದೀಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ನಡೆಯಲಿರುವ ಈ ಕಾರ್ಯಕ್ರಮದ ಹೊಣೆಗಾರಿಕೆ ಎಲ್ಲ ಜಿಲ್ಲಾಧಿಕಾರಿಗಳು, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ವಹಿಸಲಾಗಿದೆ. ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟನಲ್ಲಿ ‘ಜನತಾ ದರ್ಶನ’ ಕಾರ್ಯಕ್ರಮ ಆಯೋಜಿಸಲಾಗಿದೆ.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ