Breaking News

ಚಳಿಗಾಲದ ಅಧಿವೇಶನದಲ್ಲಿ ಎಪಿಎಂಸಿ ಕಾಯ್ದೆಯನ್ನು ರಾಜ್ಯ ಸರ್ಕಾರ ಹಿಂಪಡೆಯುವ ಸಾಧ್ಯತೆ

Spread the love

ಬೆಂಗಳೂರು: ಸದ್ಯ ಅಸ್ತಿತ್ವದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾಯ್ದೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಅದನ್ನು ಮಂಡಿಸುವ ಸಾಧ್ಯತೆ ಇದೆ.
ಬೆಂಗಳೂರು: ಸದ್ಯ ಅಸ್ತಿತ್ವದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾಯ್ದೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಅದನ್ನು ಮಂಡಿಸುವ ಸಾಧ್ಯತೆ ಇದೆ.
ರೈತರಿಂದ ಸರಕು ಖರೀದಿಸಲು ಖಾಸಗಿ ವ್ಯಕ್ತಿಗಳು ಎಪಿಎಂಸಿ ಯಾರ್ಡ್ಗಳ ಹೊರಗೆ ಮಾರುಕಟ್ಟೆಗಳನ್ನು ಸ್ಥಾಪಿಸಲು ಅನುವು ಮಾಡಿಕೊಡುವ ಎಪಿಎಂಸಿ ಕಾಯ್ದೆ ತಿದ್ದುಪಡಿಗಳನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಈ ವರ್ಷದ ಜುಲೈನಲ್ಲಿ, ರಾಜ್ಯ ಸರ್ಕಾರ ‘ಕರ್ನಾಟಕ ಕೃಷಿ ಉತ್ಪನ್ನ
ಮಾರುಕಟ್ಟೆ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ಮಸೂದೆ, 2023 ಮಂಡಿಸುವ ಮೂಲಕ ಕಾಯ್ದೆ ಹಿಂಪಡೆಯಲು ಪ್ರಯತ್ನಿಸಿತು. ಬಿಜೆಪಿ ಹಾಗೂ ಜೆಡಿಎಸ್ ಇದನ್ನು ವಿರೋಧಿಸಿದ್ದರಿಂದ ಮೇಲ್ಮನೆಯಲ್ಲಿ ಅನುಮತಿ ಪಡೆಯುವಲ್ಲಿ ವಿಫಲವಾಯಿತು. ನಂತರ ಎಪಿಎಂಸಿ ಸಚಿವ ಶಿವಾನಂದ ಪಾಟೀಲ ನೇತೃತ್ವದ ಆಯ್ಕೆ ಸಮಿತಿಗೆ ಶಿಫಾರಸು ಮಾಡಲಾಗಿತ್ತು.

Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ