Breaking News

ಮೈಸೂರು: ಮಹಿಳೆ ಬಲಿ ಪಡೆದ ಹುಲಿ ಸೆರೆಗೆ 3 ಸಾಕಾನೆ, 207 ಸಿಬ್ಬಂದಿಯಿಂದ ಕಾರ್ಯಾಚರಣೆ

Spread the love

ಮೈಸೂರು: ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದ ಬೆಳ್ಳೂರು ಹುಂಡಿ ಜಮೀನಿನಲ್ಲಿ ದನಗಾಹಿ ಮಹಿಳೆಯನ್ನು ಹುಲಿಯೊಂದು ಕೊಂದು ಹಾಕಿದ ಬೆನ್ನಲ್ಲೇ ಅರಣ್ಯ ಇಲಾಖೆ ಎಚ್ಚರಿಕೆ ವಹಿಸಿದೆ.

ಇಲ್ಲಿನ ಸುತ್ತಮುತ್ತಲ ಗ್ರಾಮಸ್ಥರು ಒಳಗೊಂಡಂತೆ 207 ಸಿಬ್ಬಂದಿಯೊಂದಿಗೆ ಅರಣ್ಯ ಇಲಾಖೆ ಹುಲಿ ಸೆರೆ ಕಾರ್ಯಾಚರಣೆಯಲ್ಲಿ ತೊಡಗಿದೆ.

ಡ್ರೋನ್ ಮೂಲಕವೂ ಕಾರ್ಯಾಚರಣೆ: ಹುಲಿ ಚಲನವಲನಗಳ ಪತ್ತೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹೆಡಿಯಾಲ ವಲಯದಲ್ಲಿ ಕಾರ್ಯಾಚರಣೆ ಚುರುಕುಗೊಂಡಿದೆ. ಇದಕ್ಕಾಗಿ ಪಾರ್ಥ, ರೋಹಿತ್, ಹಿರಣ್ಯ ಎಂಬ ಸಾಕಾನೆಗಳನ್ನು ಬಳಸಿಕೊಳ್ಳಲಾಗಿದೆ. ಹುಲಿ ದಾಳಿ ಮಾಡಿದ ಸ್ಥಳದಲ್ಲಿ ಬೋನಿರಿಸಲಾಗಿದೆ‌. ಡ್ರೋನ್ ಮೂಲಕವೂ ಚಲನವಲನ ಪತ್ತೆಗೆ ಇಲಾಖೆ ಮುಂದಾಗಿದೆ.

 ಹುಲಿ ಸೆರೆ ಕಾರ್ಯಾಚರಣೆಇತ್ತೀಚೆಗೆ ಇಬ್ಬರ ಮೇಲೆ ದಾಳಿ ಮಾಡಿದ ಹುಲಿ (ನವೆಂಬರ್ 24) ಮಹಿಳೆಯನ್ನು ಬಲಿ ಪಡೆದಿತ್ತು. ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ರತ್ನಮ್ಮ ಮೃತಪಟ್ಟಿದ್ದರು. ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆಗಿಳಿದು, ಹುಲಿ ಪತ್ತೆಗೆ ಹರಸಾಹಸಪಡುತ್ತಿದೆ. ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ