Breaking News

ಒಂದೇ ಕುಟುಂಬದ ಐವರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ತುಮಕೂರು: ಒಂದೇ ಕುಟುಂಬದ ಐವರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

ನಗರದ ಸದಾಶಿವನಗರದ ಗರೀಬ್‌ಸಾಬ್‌ (32), ಸುಮಯಾ (30), ಹಜೀರಾ, ಮಹ್ಮದ್‌ ಶುಭಾನ್‌, ಮಹ್ಮದ್‌ ಮುನೀರ್‌ ಮೃತರು. ಮೃತರೆಲ್ಲರುವ ಶಿರಾ ತಾಲೂಕು ಚಿಕ್ಕನಹಳ್ಳಿಯ ನಿವಾಸಿಗಳು ಎನ್ನಲಾಗಿದ್ದು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತುಮಕೂರಿನ ಸದಾಶಿವನಗರದಲ್ಲಿ ವಾಸವಿದ್ದರು.

 

ಜೀವನ ನಿರ್ವಹಣೆಗೆ ಕಬಾಬ್‌ ಅಂಗಡಿ ನಡೆಸುತ್ತಿದ್ದ ಕುಟುಂಬ ಆತ್ಮಹತ್ಯೆಗೆ ಶರಣಾಗಿರುವುದು ಬಂಧುಗಳಲ್ಲಿ ಆತಂಕಕ್ಕೆ ದೂಡಿದೆ. ಅಕ್ಕಪಕ್ಕದ ಮನೆಯವರು ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದರು, ಇದರಿಂದ ಬೇಸತ್ತು ಕುಟುಂಬದ ಐದೂ ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿಕರು ದೂರಿದ್ದಾರೆ.

ಕೆಳಗಡೆ ಬಾಡಿಗೆಗೆ ಇದ್ದ ಕಲಂದರ್‌ ಎಂಬುವರು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಅವರೇ ನಮ್ಮ ಸಾವಿಗೆ ಕಾರಣ ಎಂದು ವಿಡಿಯೋ ಚಿತ್ರೀಕರಣ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಬೇಕು. ನಾವು ಯಾರ ತಂಟೆಗೂ ಹೋಗುತ್ತಿರಲಿಲ್ಲ. ಅಕ್ಕಪಕ್ಕದ ಮನೆಯವರು ದೌರ್ಜನ್ಯ ನೀಡುತ್ತಿದ್ದರು. ಬಡವರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ನಮ್ಮ ಮೃತದೇಹದ ಪರೀಕ್ಷೆ ನಡೆಸಬೇಡಿ ಎಂದು ವಿಡಿಯೋದಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಸಿಎಂ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದವರೇ ವಿಶ್ವಾಸ ಕಳೆದುಕೊಂಡಿದ್ದಾರೆ: ಬಿ ವೈ ವಿಜಯೇಂದ್ರ

Spread the loveಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದ ಶಾಸಕರುಗಳೇ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ