Breaking News

ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ

Spread the love

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

140 ಕೋಟಿ ಭಾರತೀಯರಿಗೆ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಮೋದಿ ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್​ನಲ್ಲಿ ಫೋಟೋಸಮೇತ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಕಳೆದ ರಾತ್ರಿ ತಿರುಮಲದಲ್ಲಿ ತಂಗಿದ್ದರು. ಇಂದು ದೇವರ ದರ್ಶನ ಪಡೆದ ಅವರು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡರು.

 

 

ಇದಕ್ಕೂ ಮುನ್ನ, ಭಾನುವಾರ ತಿರುಪತಿ ವಿಮಾನ ನಿಲ್ದಾಣದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಮತ್ತು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಆಗಮಿಸಿದ್ದರು. ಅಬ್ದುಲ್ ನಜೀರ್ ಅವರು ಪ್ರಧಾನಿ ಮೋದಿಯವರೊಂದಿಗೆ ತಿರುಮಲಕ್ಕೆ ತೆರಳಿದ್ದರು. ಮುಖ್ಯಮಂತ್ರಿ ಜಗನ್ ನಂತರ ವಿಜಯವಾಡಕ್ಕೆ ಹಿಂತಿರುಗಿದ್ದರು.

 

 

ಉಪ ಮುಖ್ಯಮಂತ್ರಿ ಕೆ.ನಾರಾಯಣಸ್ವಾಮಿ, ವಿದ್ಯುತ್ ಖಾತೆ ಸಚಿವ ಪೆದ್ದಿರೆಡ್ಡಿ ರಾಮಚಂದ್ರರೆಡ್ಡಿ, ಟಿಟಿಡಿ ಟ್ರಸ್ಟ್ ಬೋರ್ಡ್ ಅಧ್ಯಕ್ಷ ಬಿ.ಕರುಣಾಕರ್ ರೆಡ್ಡಿ, ಸಂಸದ ಪಿ.ವಿ.ಮಿಧುನ್ ರೆಡ್ಡಿ (ರಾಜಂಪೇಟೆ), ಎಂ.ಗುರುಮೂರ್ತಿ (ತಿರುಪತಿ) ಹಾಗೂ ಎನ್.ರೆಡ್ಡೆಪ್ಪ (ಚಿತ್ತೂರು), ರಾಜ್ಯಸಭಾ ಸದಸ್ಯ ಜಿ.ವಿ.ಎಲ್.ನರಸಿಂಹ ರಾವ್, ಸರ್ಕಾರಿ ಸಚೇತಕ ಚೇವಿರೆಡ್ಡಿ ಭಾಸ್ಕರ್ ರೆಡ್ಡಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ