Breaking News

ಮಂಡ್ಯದ ಗಂಡು’, ‘ಕಲಿಯುವಗದ ಕರ್ಣ’ ಅಂಬರೀಶ್ ಅವರು ಜನ್ಮದಿನೋತ್ಸವ.

Spread the love

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಗಳಿಸಿದ್ದ ‘ಮಂಡ್ಯದ ಗಂಡು’, ‘ಕಲಿಯುವಗದ ಕರ್ಣ’ ಅಂಬರೀಶ್ ಅವರು ಜನ್ಮದಿನೋತ್ಸವ. ಈ ಹಿನ್ನೆಲೆಯಲ್ಲಿ ಪತ್ನಿ ಸುಮಲತಾ ಅಂಬರೀಶ್ ಸೇರಿದಂತೆ ಅನೇಕರು ಸೋಶಿಯಲ್ ಮೀಡಿಯಾದ ಮೂಲಕ ಶುಭಾಶಯ ಕೋರುತ್ತಿದ್ದಾರೆ.

ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್ ಕಾರಣದಿಂದ ಅದೂ ಸಾಧ್ಯವಾಗಿಲ್ಲ.

ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ ಅವರನ್ನು ನಮ್ಮಿಂದ ಶಾಶ್ವತವಾಗಿ ದೂರ ಮಾಡಿದೆ. ಅವರ ಹೃದಯ ಬ್ರಹ್ಮಾಂಡದಷ್ಟೇ ತುಂಬಾ ವಿಶಾಲವಾಗಿತ್ತು. ಜೀವನದಲ್ಲಿ ಅವರೊಂದಿಗೆ ನಾನು ಕೆಲವು ಹೆಜ್ಜೆಯನ್ನು ಹಾಕಿದ್ದಕ್ಕೆ ನನಗೆ ಹೆಮ್ಮೆ ಇದೆ” ಎಂದು ಪ್ರೀತಿಯಿಂದ ಅಂಬರೀಶ್ ಬಗ್ಗೆ ಬರೆದುಕೊಂಡಿದ್ದಾರೆ. ಜೊತೆಗೆ ಫೋಟೋವೊಂದನ್ನು ಶೇರ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್ ಮಾಡಿ ಮೂರು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದು, “ನಿಮ್ಮ ನೆನಪೇ ನಿತ್ಯ ಜ್ಯೋತಿ, ನಿಮ್ಮ ಸ್ಮರಣೆಯೇ ಅಮರ ಪ್ರೀತಿ” ಎಂದು ಬರೆದುಕೊಂಡಿದ್ದಾರೆ.ಇನ್ನೂ ರೆಬೆಲ್‍ಸ್ಟಾರ್ ಅಂಬರೀಷ್ ಅವರ ಜನ್ಮ ಜಯಂತಿಯ ಪ್ರಯುಕ್ತ ಯಂಗ್ ಅಭಿಷೇಕ್ ಅಂಬರೀಷ್ ಅಭಿನಯದ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗುತ್ತಿದೆ. ಇಂದು ಬೆಳಗ್ಗೆ 9.45ಕ್ಕೆ ಕನ್ನಡ ಪಿಚ್ಚರ್ ಯೂಟ್ಯೂಬ್ ಚಾನೆಲ್‍ನಲ್ಲಿ ದುನಿಯಾ ಸೂರಿ ನಿರ್ದೇಶನದ ಸುಧೀರ್ ಕೆ.ಎಂ ನಿರ್ಮಾಣದ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಅಧಿಕೃತ ಫಸ್ಟ್‍ಲುಕ್ ವಿಡಿಯೋ ರಿಲೀಸ್ ಆಗುತ್ತಿದೆ.


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ