Breaking News

ಬಿಬಿಎಂಪಿ ಅಧೀನದ ನರ್ಸರಿ ಸ್ಕೂಲ್ ಕಟ್ಟಡ ಕುಸಿತ ; ತಪ್ಪಿದ ಭಾರಿ‌ ಅನಾಹುತ

Spread the love

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ನರ್ಸರಿ ಶಾಲಾ ಕಟ್ಟಡವೊಂದು ಕುಸಿದುಬಿದ್ದಿರುವ ಘಟನೆ ಇಂದು ಮುಂಜಾನೆ ಶಿವಾಜಿನಗರದಲ್ಲಿ ನಡೆದಿದೆ.

ಶಿವಾಜಿನಗರದ ಕುಕ್ಸ್ ರಸ್ತೆಯ ಬಿ ಕ್ರಾಸ್​ನಲ್ಲಿರುವ ನರ್ಸರಿ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷದಡಿ ಕೆಲ ವಾಹನಗಳು ಸಿಲುಕಿ ಜಖಂಗೊಂಡಿವೆ. ಯಾರೂ ಇರದಿದ್ದಾಗ ಬೆಳಗಿನ ಜಾವ ಘಟನೆ ಸಂಭವಿಸಿದ ಪರಿಣಾಮ ಅದೃಷ್ಟವಶಾತ್ ಭಾರಿ ಅವಘಡವೊಂದು ತಪ್ಪಿದಂತಾಗಿದೆ.

 ಬಿಬಿಎಂಪಿ ಅಧೀನದ ನರ್ಸರಿ ಸ್ಕೂಲ್ ಕಟ್ಟಡ ಕುಸಿತಬಿಬಿಎಂಪಿಗೆ ಸೇರಿದ ಇಂಗ್ಲಿಷ್ ನರ್ಸರಿ ಸ್ಕೂಲ್ ಕಟ್ಟಡ ಇದಾಗಿದ್ದು, ಸುಮಾರು 70 ರಿಂದ 80 ಮಕ್ಕಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕಟ್ಟಡ ಶಿಥಿಲಾವಸ್ಥೆ ತಲುಪಿದ್ದರೂ ಸಹ ಅದೇ ಕಟ್ಟಡದಲ್ಲಿ ಶಾಲೆ ಮುಂದುವರೆಸಲಾಗಿತ್ತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸದ್ಯ ಸ್ಥಳದಲ್ಲಿರುವ ಕಟ್ಟಡದ ಅವಶೇಷಗಳನ್ನ ತೆರವುಗೊಳಿಸಲಾಗುತ್ತಿದೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ