ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ರಮೇಶ್ ವಿ ಕತ್ತಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದು, ಭೇಟಿ ವೇಳೆ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರು: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ರಮೇಶ್ ವಿ ಕತ್ತಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದು, ಭೇಟಿ ವೇಳೆ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ವಿಜಯೇಂದ್ರ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರು ಪಕ್ಷದ ಅಧ್ಯಕ್ಷರಾದ ನಂತರ ಅವರ ನಿವಾಸಕ್ಕೆ ಇದು ನನ್ನ ಮೊದಲ ಭೇಟಿಯಾಗಿದ್ದು, ಭೇಟಿ ವೇಳೆ ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರಿಗೆ ತಿಳಿಸಿದಂತೆ ಚಿಕ್ಕೋಡಿಯಲ್ಲಿನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರಿಸಿದೆ. ಈ ಹಿಂದೆ ನನಗೆ ರಾಜ್ಯಸಭೆಗೆ ನಾಮನಿರ್ದೇಶನ ಮತ್ತು ಎಂಎಲ್ಸಿ ಹುದ್ದೆಯನ್ನು ನಿರಾಕರಿಸಿದ್ದರಿಂದ ಈ ಬಾರಿ ಪಕ್ಷದ ಟಿಕೆಟ್ ಸಿಗುತ್ತದೆ ಎಂಬ ಭರವಸೆಯಿದೆ ಎಂದು ಹೇಳಿದರು.