Breaking News

ಕಾಂಗ್ರೆಸ್ ಡೋಂಗಿತನ ಕಳಚುತ್ತಿದೆ ಎಂದು ಬಿಜೆಪಿ ಆರೋಪ: ಬಿಜೆಪಿ

Spread the love

ಕಾಂಗ್ರೆಸ್ ಸರ್ಕಾರ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ, ಇದೀಗ ಕಾಂಗ್ರೆಸ್ ಡೋಂಗಿತನ ಕಳಚುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಸಿದ್ದರಾಮಯ್ಯ ಸರ್ಕಾರ ತೆಲಂಗಾಣ ಪತ್ರಿಕೆಗಳಲ್ಲಿ ಗ್ಯಾರೆಂಟಿ ಬಗ್ಗೆ ಜಾಹೀರಾತು ನೀಡಿದ್ದು, ಈಗಾಗಲೇ ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗ ನೊಟೀಸ್ ನೀಡಿದೆ.

 

ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ್ದು, ಸಿಎಂ ಸಿದ್ದು ತೆಲಂಗಾಣದಲ್ಲಿ ಮತದಾರರಿಗೆ ಆಮಿಷವೊಡ್ಡುವ ಮೂಲಕ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದಿದೆ.

ತೆರಿಗೆದಾರರ ಹಣದಿಂದ ಹಾಕಲಾದ ಕಾಂಗ್ರೆಸ್ ಜಾಹೀರಾತುಗಳ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ. ಕಾಂಗ್ರೆಸ್ ಕರ್ನಾಟಕಕ್ಕೆ ದೊಡ್ಡ ಅವಮಾನ ಎಂದು ಹೇಳಿದೆ.

ಕರ್ನಾಟಕವನ್ನು ಕಾಂಗ್ರೆಸ್ ತನ್ನ ಪಾಲಿನ ಎಟಿಎಂ ಮಾಡಿಕೊಂಡಿದೆ, ಕಣ್ಣಿಗೆ ಕಾಣುವಂಥ ಸಾಕ್ಷಿಗಳಿವೆ. ತೆಲಂಗಾಣದ ಪತ್ರಿಕೆಯಲ್ಲಿ ಜಾಹೀರಾತು ಹಾಕಿಸಲು ನಮ್ಮ ರಾಜ್ಯದ ತೆರಿಗೆ ಹಣ ಖರ್ಚು ಮಾಡಿದ್ದಾರೆ. ನೈತಿಕವಾಗಿ ದಿವಾಳಿಯಾಗಿ ಇದೀಗ ಭ್ರಷ್ಟಾಚಾರದಲ್ಲಿ ಹೊಸ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಬರೆಯುತ್ತಿದ್ದಾರೆ ಎಂದು ಬಿಜೆಪಿ ಹೇಳಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ