Breaking News

ತೆಲಂಗಾಣದಲ್ಲಿ ಜಾಹೀರಾತು ಪ್ರಕಟ: ಕರ್ನಾಟಕ ಸರಕಾರಕ್ಕೆ ಇಸಿ ನೋಟಿಸ್‌

Spread the love

ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ತೆಲಂಗಾಣ ಪತ್ರಿಕೆಗಳಲ್ಲಿ ಸರಕಾರಿ ಜಾಹೀರಾತು ನೀಡುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕರ್ನಾಟಕ ಸರಕಾರಕ್ಕೆ ಚುನಾವಣಾ ಆಯೋಗ ನೋಟಿಸ್‌ ಜಾರಿ ಮಾಡಿದೆ.

ತೆಲಂಗಾಣದ ಪತ್ರಿಕೆಗಳಲ್ಲಿ ನಿಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಪ್ರಕಟಣೆಗಳನ್ನು ನೀಡುವುದರ ಅರ್ಥವೇನು?

ಎಂದು ಚುನಾವಣಾ ಆಯೋಗ ಪ್ರಶ್ನೆ ಮಾಡಿದ್ದು, ನೀಡಿರುವ ನೋಟಿಸ್‌ಗೆ ನವೆಂಬರ್ 28ರ ಸಂಜೆ 5ಗಂಟೆಯೊಳಗೆ ಉತ್ತರಿಸುವಂತೆ ಆದೇಶ ಜಾರಿಮಾಡಿದೆ.

ಕರ್ನಾಟಕ ರಾಜ್ಯ ಸರ್ಕಾರದ ಘೋಷಣೆಗಳ ವಿಷಯವನ್ನು ಬಿಜೆಪಿ ಮತ್ತು ಬಿಆರ್‌ಎಸ್ ತಮ್ಮ ಗಮನಕ್ಕೆ ತಂದಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗೆ ಕಾರಣವಾದ ಸಂದರ್ಭಗಳನ್ನು ವಿವರಿಸಲು ಮತ್ತು ಅಂತಹ ಪ್ರಕಟಣೆಗಳನ್ನು ತಕ್ಷಣವೇ ನಿಲ್ಲಿಸಿ ಆದೇಶ ಹೊರಡಿಸಿದೆ.

119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30 ರಂದು ಚುನಾವಣೆ ನಡೆಯಲಿದ್ದು, ಬಿಆರ್‌ಎಸ್, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಇದೆ. ಡಿಸೆಂಬರ್‌ 3ರಂದು ಮತಎಣಿಕೆ ಕಾರ್ಯ ನಡೆಯಲಿದೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ