ಒಂದೇ ಆವರಣದಲ್ಲಿ ಅಥವಾ 500 ಮೀ. ಅಂತರದಲ್ಲಿ 500 ವಿದ್ಯಾರ್ಥಿಗಳ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳೆಂದು ಪರಿಗಣಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕವು ನಿರ್ದೇಶನ ನೀಡಿದೆ.
ರಾಜ್ಯದಲ್ಲಿ ಪ್ರಸ್ತುತ 285 ಕೆಪಿಎಸ್ ಶಾಲೆಗಳು ಕಾರ್ಯನಿರ್ವಹಿಸತ್ತಿವೆ.
ಒಂದೇ ಸೂರಿನಡಿ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವದವರೆಗೂ ಶಿಕ್ಷಣ ನೀಡುವ ಸಲುವಾಗಿ ಹಂತ ಹಂತವಾಗಿ ಒಂದು ಸಾವಿರ ಕೆಪಿಎಸ್ ಸ್ಥಾಪಿಸುವ ಗುರಿ ಹೊಂದಲಾಗಿದೆ.
ಈ ಸಂಬಂಧ ಹಲವು ಜನಪ್ರತಿನಿಧಿಗಳು, ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಎಸ್‌ಡಿಎಂಸಿ ವತಿಯಿಂದ ಕೆಪಿಎಸ್ ಸ್ಥಾಪನೆಗೆ ಪ್ರಸ್ತಾವನೆಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ 2024-25ನೇ ಸಾಲಿನಿಂದ ರಾಜ್ಯದಲ್ಲಿ ಹೊಸದಾಗಿ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂತಹ ಎಷ್ಟು ಶಾಲೆಗಳಿವೆ ಎಂಬುದನ್ನು ಗುರುತಿಸಿ ನ.30ರೊಳಗೆ ಮಾಹಿತಿ ನೀಡುವಂತೆ ಸಮಗ್ರ ಶಿಕ್ಷಣ ನಿರ್ದೇಶಕರು ಸೂಚನೆ ನೀಡಿದ್ದಾರೆ.