Breaking News

ಮಗು ಮಾರಾಟ ಜಾಲ ಭೇದಿಸಿದ ಸಿಸಿಬಿ ಪೊಲೀಸರು

Spread the love

ಬೆಂಗಳೂರು: ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ನವಜಾತ ಶಿಶು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಪ್ರಕರಣದಲ್ಲಿ 7 ಜನ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರ್.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಶನಿವಾರ ಮಗು ಮಾರಾಟಕ್ಕೆ ಯತ್ನಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಸಂಘಟಿತ ಅಪರಾಧ ವಿಭಾಗದ ಅಧಿಕಾರಿಗಳು ಕಣ್ಣನ್ ರಾಮಸ್ವಾಮಿ, ಹೇಮಲತಾ, ಮಹಾಲಕ್ಷ್ಮಿ, ಶರಣ್ಯ, ಸಹಾಸಿನಿ, ರಾಧಾ ಹಾಗೂ ಗೋಮತಿ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಗಳು‌, ಗರ್ಭ ಧರಿಸಿ ಮಗುವಿಗೆ ಜನ್ಮ ನೀಡಲು ಇಷ್ಟವಿಲ್ಲದವರ ಬಳಿ ಹಣದ ಆಮಿಷವೊಡ್ಡಿ, ಅವರ ಮಗುವನ್ನು ಮಾರಾಟ ಮಾಡಿಕೊಡುತ್ತೇವೆ ಎಂದು ಹೇಳಿ ಹೆರಿಗೆಯ ಬಳಿಕ ನವಜಾತ ಶಿಶುಗಳನ್ನು ತಮಿಳುನಾಡಿನಿಂದ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದರು. ಆರೋಪಿಗಳು ಗರ್ಭಿಣಿಯರಿಗೆ ಮಾತ್ರವಲ್ಲದೆ, ಯುವತಿಯರಿಗೂ ಬಾಡಿಗೆ ತಾಯ್ತನದ ಮೂಲಕ ಮಗುವಿಗೆ ಜನ್ಮ ನೀಡಿ, ಮಗು ಮಾರಾಟ ಮಾಡಿ ಹಣ ಮಾಡಬಹುದು ಎಂದೂ ಆಮಿಷವೊಡ್ಡುತ್ತಿದ್ದರು.

 ಬಂಧಿತ ಆರೋಪಿಗಳುಬೆಂಗಳೂರಿನಲ್ಲಿ ಮಕ್ಕಳನ್ನು ಖರೀದಿಸುವವರಿಂದ 8 ರಿಂದ 10 ಲಕ್ಷ ರೂ ಹಣ ಪಡೆದು, ನಕಲಿ ದಾಖಲೆಗಳನ್ನು ನೀಡಿ ಮಾರಾಟ ಮಾಡುತ್ತಿದ್ದರು. ಆರ್. ಆರ್ ನಗರದಲ್ಲಿ 20 ದಿನದ ಗಂಡು ಮಗುವನ್ನು ಮಾರಾಟ ಮಾಡುತ್ತಿದ್ದಾಗ, ಮಗುವಿನ ತಾಯಿಯು ಸಹ ಜೊತೆಯಲ್ಲೇ ಇದ್ದಳು. ಆರೋಪಿಗಳು ಈ ಹಿಂದೆಯೂ ಸಹ ಇದೇ ರೀತಿ ಮಕ್ಕಳ ಮಾರಾಟ ಮಾಡಿರುವ ಕುರಿತು ಮಾಹಿತಿ ಇದ್ದು, ಸದ್ಯ ಆರೋಪಿಗಳನ್ನ ಹೆಚ್ಚಿನ ತನಿಖೆಗೊಳಪಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ