Breaking News

ಆರೋಗ್ಯ ಸೇವೆಗೆ 262 ಆಂಬ್ಯುಲೆನ್ಸ್​ ಸೇರ್ಪಡೆ:ದಿನೇಶ್ ಗುಂಡೂರಾವ್

Spread the love

ಬೆಂಗಳೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಪೂರೈಸಿದೆ. ಆರೋಗ್ಯ ಇಲಾಖೆ ಜವಾಬ್ದಾರಿ ತೆಗೆದುಕೊಂಡ ಬಳಿಕ ಈ ಆರು ತಿಂಗಳ ಅವಧಿಯಲ್ಲಿ ಜನಸಾಮಾನ್ಯರಿಗೆ ತುರ್ತಾಗಿ ಆಗಬೇಕಾದ ಆರೋಗ್ಯ ಸೇವೆಗಳನ್ನು ಸುಧಾರಣೆಯತ್ತ ತರುವ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಿದ್ದೇನೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ನಡೆದ ಸದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆಂಬ್ಯುಲೆನ್ಸ್​​ ಮತ್ತು ಡಯಾಲಿಸಿಸ್. ಈ ಎರಡು ಆರೋಗ್ಯ ಸೇವೆಗಳಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ನಾನು ಹಳೆಯದನ್ನು ಕೆದಕಲು ಹೋಗುವುದಿಲ್ಲ. ಸಕಾರಾತ್ಮಕ ಚಿಂತನೆಯೊಂದಿಗೆ ಇರುವ ಸಮಸ್ಯೆಗಳನ್ನು ಸರಿಪಡಿಸುವ ಕಡೆ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದರು.

ಆಂಬ್ಯುಲೆನ್ಸ್ ಸೇವೆ ಬಲಪಡಿಸಲು ಆದ್ಯತೆ: ಜನರ ಆರೋಗ್ಯ ಸೇವೆಗಾಗಿ 262 ಹೊಸ ಆಂಬ್ಯುಲೆನ್ಸ್​ಗಳು ಸೇರ್ಪಡೆಯಾಗುತ್ತಿವೆ. ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನೂತನ ಆಂಬ್ಯುಲೆನ್ಸ್​​ಗಳಿಗೆ ಚಾಲನೆ ಸಿಗಲಿದೆ. ಒಟ್ಟು 82,02,88,120 ಕೋಟಿ ರೂ. ವೆಚ್ಚದ ಯೋಜನೆಯಾಗಿದೆ. ​157 BLS – ಬೇಸಿಕ್ ಲೈಫ್ ಸಪೋರ್ಟ್ ಆಂಬ್ಯುಲೆನ್ಸ್‌ಗಳು, 105 ALS – ಸುಧಾರಿತ ಲೈಫ್ ಸಪೋರ್ಟ್ ಆಂಬ್ಯುಲೆನ್ಸ್ ಗಳು, ​ALS ಆಂಬ್ಯುಲೆನ್ಸ್ ಗಳು, ಟ್ರಾನ್ಸ್‌ಪೋರ್ಟ್ ವೆಂಟಿಲೇಟರ್ ಮತ್ತು ಡಿಫಿಬ್ರಿಲೇಟರ್ ಹೊಂದಿವೆ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ