Breaking News

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸಿದ್ದಾರೆ. ಆದ್ದರಿಂದ, ಅಧಿವೇಶನದಲ್ಲಿ ಭಾಗವಹಿಸುತ್ತೇನೆ:

Spread the love

ಬೆಂಗಳೂರು: ತನ್ನ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದಿಂದ ತೀವ್ರ ಅಸಮಾಧಾನಗೊಂಡು ಸಿಎಂಗೆ ಪತ್ರ ಬರೆದಿದ್ದ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನಕ್ಕೆ ಬುಧವಾರ ರಾತ್ರಿ ಪಾಟೀಲರನ್ನು ಕರೆಯಿಸಿಕೊಂಡು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತನಾಡಿ ಸಮಸ್ಯೆ ಪರಿಹರಿಸಿದರು.

ಸಿಎಂ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನಗೆ ಕರೆ ಮಾಡಿ ಬರುವುದಕ್ಕೆ ಹೇಳಿದ್ದರು. ನನ್ನ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸಿದ್ದಾರೆ. ಮತ್ತೆ ಯಾವುದೇ ಸಮಸ್ಯೆಯಾಗುವುದಿಲ್ಲ. ನನಗೆ ಸಮಾಧಾನ ಆಗಿದೆ. ಸಿದ್ದರಾಮಯ್ಯರ ಮೇಲೆ ನನಗೆ ನಂಬಿಕೆ ಇದೆ” ಎಂದು ಹೇಳಿದರು.

“ಸಚಿವ ಕೃಷ್ಣ ಬೈರೇಗೌಡ ನನಗೊಬ್ಬರಿಗಷ್ಟೇ ಅಲ್ಲ, ಎಲ್ಲರಿಗೂ ಸವಾಲು ಹಾಕಿದ್ದಾರೆ. ಅಧಿವೇಶನದಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಆದ್ದರಿಂದ ಅಧಿವೇಶನದಲ್ಲಿ ಭಾಗವಹಿಸುತ್ತೇನೆ. ಇಂದಿನ ಸಭೆ ತೃಪ್ತಿ ತಂದಿದೆ. ಸಚಿವ ಪ್ರಿಯಾಂಕ್ ಖರ್ಗೆ ಬೇರೆ ಸಭೆಯಲ್ಲಿ ಭಾಗಿಯಾಗಿದ್ದರು. ಹಾಗಾಗಿ, ಇಲ್ಲಿಗೆ ಬಂದಿಲ್ಲ. ಅನುದಾನ ವಿಚಾರವಾಗಿ ನನಗೆ ಅಸಮಾಧಾನ ಇಲ್ಲ. ಗ್ಯಾರಂಟಿ ಕೊಟ್ಟ ಕಾರಣ ಅನುದಾನ ಸಿಗುತ್ತಿಲ್ಲ. ಇದು ನನಗೆ ಗೊತ್ತಿದೆ. ಪಂಚ ರಾಜ್ಯಗಳ ಚುನಾವಣೆ ಇದ್ದ ಕಾರಣ ಸುಮ್ಮನಿದ್ದೆ. ಈಗ ಈ ವಿಚಾರ ಎತ್ತಿದ್ದೇನೆ. ಪ್ರಿಯಾಂಕ್ ಖರ್ಗೆ ಜೊತೆ ಯಾವುದೇ ಮನಸ್ತಾಪ ಇಲ್ಲ, ತಂದೆಗೆ ಕೊಡುವ ಗೌರವವನ್ನು ಪ್ರಿಯಾಂಕ್ ಖರ್ಗೆ ನನಗೆ ಕೊಡುತ್ತಾರೆ. ಕೃಷ್ಣ ಬೈರೇಗೌಡ ಜೊತೆಗೂ ಯಾವುದೇ ಭಿನ್ನಾಭಿಪ್ರಾಯ ಇಲ್ಲ” ಎಂದು ತಿಳಿಸಿದರು.


Spread the love

About Laxminews 24x7

Check Also

ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಅನ್ನೋದು ತಪ್ಪು: ಪಂಡಿತಾರಾಧ್ಯಶ್ರೀ ಅಭಿಪ್ರಾಯ ವಿರೋಧಿಸಿದ ವಚನಾನಂದಶ್ರೀ

Spread the loveಚಿತ್ರದುರ್ಗ, ಸೆಪ್ಟೆಂಬರ್ 7: ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಎಂಬರ್ಥದಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಪಂಡಿತಾರಾಧ್ಯ ಶ್ರೀಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ