Breaking News

ಚಳಿಗಾಲ ಅಧಿವೇಶನ ಮುಗಿಯುವವರೆಗೂ ಎಂಇಎಸ್​ ಮುಖಂಡರನ್ನು ಗಡಿಪಾರು ಮಾಡಬೇಕು:ಕರವೇ

Spread the love

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಮಹಾಮೇಳಾವ್​ ನಡೆಸಲು ಸಿದ್ದತೆ ಮಾಡಿಕೊಳ್ಳುತ್ತಿದೆ.

ಇದು ಗಡಿ ನಾಡ ಕನ್ನಡಿಗರ ಕಣ್ಣು ಕೆಂಪಾಗಿಸಿದೆ ಯಾವುದೇ ಕಾರಣಕ್ಕೂ ಮಹಾಮೇಳಾವ್ ನಡೆಸಲು ಅನುಮತಿ ನೀಡಬಾರದು ಜೊತೆಗೆ ಎಂಇಎಸ್ ಸಂಘಟನೆ ಬ್ಯಾನ್ ಮಾಡಿ ಗಡಿಪಾರು ಮಾಡಬೇಕು ಎಂದು ಕರವೇ ಶಿವರಾಮೇಗೌಡ ಬಣ ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಎಂಇಎಸ್ ಪದೇ ಪದೆ ಗಡಿಯಲ್ಲಿ ಖ್ಯಾತೆ ತೆಗೆಯುವ ಕೆಲಸ ಮಾಡುತ್ತಲೇ ಬರುತ್ತಿದೆ.‌ ಇತ್ತೀಚೆಗಷ್ಟೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕರಾಳ ದಿನಾಚರಣೆ ಮಾಡಲು ಬಂದು ಲಾಠಿ ಏಟು ತಿಂದ ಎಂಇಎಸ್ ನಾಯಕರು ಈಗ ಮತ್ತೆ ಬಾಲ ಬಿಚ್ಚಿದ್ದಾರೆ. ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ವೇಳೆ ಮಹಾಮೇಳಾವ್ ನಡೆಸಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ಮತ್ತೆ ಗಡಿ ಮತ್ತು ಭಾಷೆ ಹೆಸರಲ್ಲಿ ವಿಷ ಬೀಜ ಬಿತ್ತಲು ಮುಂದಾಗಿದೆ. ಇದರ ವಿರುದ್ಧ ಸಿಡಿದೆದ್ದಿರುವ ಕರವೇ ಕಾರ್ಯಕರ್ತರು ಚನ್ನಮ್ಮ ವೃತ್ತದ ಮುಂದೆ ಧರಣಿ ನಡೆಸಿದರು‌.

ಈ ವೇಳೆ ಮಾತನಾಡಿದ ಮುಖಂಡ ವಾಜೀದ್ ಹಿರೇಕೊಡಿ ಬೆಳಗಾವಿ ಎಂಇಎಸ್ ಅಪ್ಪನ ಆಸ್ತಿ ಅಲ್ಲ. ನಾಡದ್ರೋಹಿ ಕೃತ್ಯ ಮಾಡುವುದಿದ್ದರೆ ಮಹಾರಾಷ್ಟ್ರಕ್ಕೆ ಹೋಗಿ ಮಾಡಲಿ. ಇಲ್ಲಿ ಏನಾದರೂ ಬಾಲ ಬಿಚ್ಚಲು ಬಂದರೆ ನಿಮ್ಮ ಬಾಲವನ್ನು ನಾವು ಕಟ್ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಬಳಿಕ ಮತ್ತೋರ್ವ ಮುಖಂಡ ಮಹಾಂತೇಶ ರಣಗಟ್ಟಿಮಠ ಮಾತನಾಡಿ, ಅಧಿವೇಶನ ಮುಗಿಯೋವರೆಗೂ ಎಂಇಎಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಬೆಳಗಾವಿಯಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ