Breaking News

ದ್ವಿತೀಯ ಪಿಯುಸಿ, ಎಸ್​​​ಎಸ್​​ಎಲ್​​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Spread the love

ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಜಾಲತಾಣದಲ್ಲಿ ಇಂದು ಪ್ರಕಟಿಸಲಾಗಿದೆ.

2024 ಮಾರ್ಚ್​ 02ರಿಂದ ಮಾರ್ಚ್​ 22ರವರೆಗೆ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ.

ಇನ್ನು ಮಾರ್ಚ್​ 25 ರಿಂದ ಏಪ್ರಿಲ್​​ 06 ರವರೆಗೆ ಎಸ್‌ಎಸ್‌ಎಲ್ ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಮಂಡಲಿ ಮೂರು ತಿಂಗಳ ಮುಂಚಿತವಾಗಿಯೇ ತಾತ್ಕಲಿಕ ವೇಳಾಪಟ್ಟಿ ಪ್ರಕಟ ಮಾಡಿದೆ.

ಮಂಡಲಿಯಿಂದ ಪ್ರಕಟಿಸಿರುವ ಎಸ್.ಎಸ್.ಎಲ್.ಸಿ.ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್‌ 15ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ.

ಆಕ್ಷೇಪಣೆಯನ್ನು ಮಂಡಲಿಯ ಇಮೇಲ್ ವಿಳಾಸ: [email protected]ಕ್ಕೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸುವುದು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಜಾರಕಿಹೊಳಿ ಬಣ ಸಂಪೂರ್ಣ ‌ಹಿಡಿತ; ಜೊಲ್ಲೆ, ದೊಡ್ಡಗೌಡ್ರ, ಕುಲಗೋಡೆ ಅಧ್ಯಕ್ಷ ಸ್ಥಾನದ ರೇಸಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ಅಂಪೈರ್

Spread the loveಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಜಾರಕಿಹೊಳಿ ಬಣ ಸಂಪೂರ್ಣ ‌ಹಿಡಿತ; ಜೊಲ್ಲೆ, ದೊಡ್ಡಗೌಡ್ರ, ಕುಲಗೋಡೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ